ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 40 ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಮೇ 07; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ. ಕೋವಿಡ್ ರೋಗಿಗಳು ಬೆಡ್ ಸಿಗುತ್ತಿಲ್ಲ ಎಂದು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಆಕ್ಸಿಜನ್ ಕೊರತೆಯೂ ಕಾಡುತ್ತಿದೆ.

Recommended Video

ಆಮ್ಲಜನಕ ಇಲ್ಲದೆ ಯಾರು ಕಷ್ಟ ಪಡಬಾರದು! | Oneindia Kannada

ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಒದಗಿಸಲು ಹರಸಾಹಸಪಡುತ್ತಿವೆ. 10 ಜಿಲ್ಲಾಸ್ಪತ್ರೆ ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ.

ಕರ್ನಾಟಕ; 9 ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್‌ಗಳೇ ಇಲ್ಲ! ಕರ್ನಾಟಕ; 9 ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್‌ಗಳೇ ಇಲ್ಲ!

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಈ ವಿಷಯವನ್ನು ತುರ್ತಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಕೊಡಲಾಗಿದೆ. ಘಟಕ ಸ್ಥಾಪನೆಗೆ ಅಗತ್ಯವಿರುವ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಯನ್ನು ತಕ್ಷಣವೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಅರ್ಹ ಗುತ್ತಿಗೆದಾರನಿಂದ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಲಾಗಿದೆ.

ಆಕ್ಸಿಜನ್ ಎಕ್ಸ್‌ಪ್ರೆಸ್ ಮೂಲಕ 2511 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಆಕ್ಸಿಜನ್ ಎಕ್ಸ್‌ಪ್ರೆಸ್ ಮೂಲಕ 2511 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು

Health Department Approval To Set Up Oxygen Production Unit In Hospital

10 ಜಿಲ್ಲಾ ಆಸ್ಪತ್ರೆಗಳಲ್ಲಿ 500 ಎಲ್‌ಪಿಎಂ ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ 390 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗುತ್ತದೆ. ಪಿಎಸ್‌ಎ ತಂತ್ರಜ್ಞಾನದ ಅಡಿ ಘಟಕ ನಿರ್ಮಾಣಗೊಳ್ಳಲಿದೆ.

ರಾಮನಗರ; ಜಿಲ್ಲಾ ಆಸ್ಪತ್ರೆಗೆ 10 ದಿನದಲ್ಲಿ ಆಕ್ಸಿಜನ್ ಟ್ಯಾಂಕ್ ರಾಮನಗರ; ಜಿಲ್ಲಾ ಆಸ್ಪತ್ರೆಗೆ 10 ದಿನದಲ್ಲಿ ಆಕ್ಸಿಜನ್ ಟ್ಯಾಂಕ್

40 ಆಸ್ಪತ್ರೆಗಳ ಪೈಕಿ ಬೆಂಗಳೂರು, ಕಲಬುರಗಿ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಹಾಸನ ಮತ್ತು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗಳು ಸೇರಿವೆ.

English summary
Karnataka health and family welfare department directed to install oxygen production unit in 10 district and 30 taluk hospital in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X