ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪರಿಗೆ ಕೊರೊನಾ: ಮೂಲ ಪತ್ತೆ ಹಚ್ಚಲು ಪರದಾಟ

|
Google Oneindia Kannada News

ಬೆಂಗಳೂರು, ಆ. 03: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಕೊರೊನಾವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಮುಖ್ಯಮಂತ್ರಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಆದರೂ ಆರೋಗ್ಯ ಇಲಾಖೆಗೆ ಹೊಸ ಸಮಸ್ಯೆ ಶುರುವಾಗಿದೆ.

Recommended Video

ಗೃಹ ಮಂತ್ರಿಗೆ ಕೊರೋನ, ಯಾರನ್ನು ಬಿಡದ ಕೋರೋನ.!! | Oneindia Kannada

ಕೊರೊನಾ ವೈರಸ್ ಸೋಂಕು ತಡೆಯಲು ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯನ್ನು ಸಿಎಂ ಯಡಿಯೂರಪ್ಪ ಅವರು ತೆಗೆದುಕೊಂಡಿದ್ದರು. ಜೊತೆಗೆ ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಮಾಸ್ಕ್ ಧರಿಸಿರುತ್ತಿದ್ದರು. ಅದರೊಂದಿಗೆ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿದ್ದರು. ಆದರೂ ಸಿಎಂ ಅವರಿಗೆ ಕೋವಿಡ್ ಸೋಂಕು ತಗುಲಿರುವುದರ ಮೂಲ ಪತ್ತೆ ಹಚ್ಚುವುದು ರಾಜ್ಯ ಆರೋಗ್ಯ ಇಲಾಖೆಗೆ ತಲೆನೋವಾಗಿದೆ.

ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ

ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಲಾಗಿತ್ತು. ಬಹುತೇಕ ಕಾರ್ಯಕ್ರಮ, ಸಭೆಗಳನ್ನು ಆನ್‌ಲೈನ್ ಮೂಲಕವೇ ನಡೆಸುತ್ತಿದ್ದರು. ಕಳೆದ ಮಾರ್ಚ್‌ ತಿಂಗಳಿನಿಂದಲೇ ಜಿಲ್ಲಾ ಪ್ರವಾಸಗಳನ್ನು ಮುಖ್ಯಮಂತ್ರಿಗಳು ರದ್ದು ಮಾಡಿದ್ದರು. NEP ಅಧ್ಯಕ್ಷರ ಭೇಟಿಯಾಗಿದ್ದಾಗಲೂ ಸಾಕಷ್ಟು ಅಂತರಕಾಯ್ದುಕೊಂಡಿದ್ದರು. ಸರ್ಕಾರದ ಒಂದು ವರ್ಷದ ಕಾರ್ಯಕ್ರಮದಲ್ಲೂ ವೇದಿಕೆ ಮೇಲೆ ಒಬ್ಬರೇ ಇದ್ದರು. ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲೂ ಸೂಕ್ತ ಮುಂಜಾಗ್ರತೆ ವಹಿಸಲಾಗಿತ್ತು. ಜೊತೆಗೆ ಸಿಎಂ ಭದ್ರತೆಯನ್ನು ನೋಡಿಕೊಳ್ಳುವ ಸಿಬ್ಬಂದಿಗೆ ಕಡ್ಡಾಯವಾಗಿ ಸೀಲ್ಡ್, ಕೈಗವಸು ಹಾಕಿಕೊಳ್ಳುತ್ತಿದ್ದರು. ಆಗಾಗ ಕೋವಿಡ್ ಪರೀಕ್ಷೆಗೆ ಭದ್ರತಾ ಸಿಬ್ಬಂದಿ ಒಳಗಾಗಿದ್ದರು.

Health Department is struggling to find the source of the infection to CM Yediyurappa

ಎಲ್ಲ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಂಡಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೇಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬುದು ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಜೊತೆಗೆ ಸೋಂಕಿನ ಮೂಲ ಪತ್ತೆಹಚ್ಚಲು ಆರೋಗ್ಯ ಇಲಾಖೆ ಪರದಾಡುತ್ತಿದೆ.

English summary
CM Yediyurappa has reported that the source of the Covid infection is a headache to the state health department. CM Yediyurappa has taken strict precautions to prevent coronavirus infection. Wearing a mask while attending any event. It also maintained a compulsory social distance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X