Dr. Puneeth Rajkumar: ಹೃದಯಘಾತ ತಡೆಯಲು ಪುನೀತ್ ಹೆಸರಲ್ಲಿ ಅಪ್ಪು ಯೋಜನೆ!
ಬೆಂಗಳೂರು, ಆಗಸ್ಟ್ 20: ಹಠಾತ್ ಹೃದಯಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹೃದಯಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಯೋಜನೆಗೆ ಮುಂದಾಗಿದೆ.
ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators (AED )ಅಳವಡಿಕೆ ಮಾಡಲಾಗುತ್ತೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಏರಪೋರ್ಟ್ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ AED ಅಳವಡಿಕೆ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೆ, ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುತ್ತೆ. ಗೋಲ್ಡನ್ ಟೈಮ್ ನಲ್ಲಿ ಟ್ರೀಟ್ ಮೆಂಟ್ ಬಳಿಕ ಆಸ್ಪತ್ರೆಗೆ ಶೀಫ್ಟ್ ಮಾಡಬಹುದು. ರೋಗಿಯನ್ನ ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.
ಹೃದಯಘಾತದ ಸಮಯದಲ್ಲಿ ಆಸ್ಪತ್ರೆಗೆ ಶಿಫ್ಟ್ ವೇಳೆಯಲ್ಲಿಯೇ ಡೆತ್ ಆಗ್ತೀವೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೇ ಹೃದಯಾಘಾತ ತಪ್ಪಿಸಲು ಮೆಡಿಸಿನ್ ಗಳನ್ನ ಪೂರೈಸಲಾಗುವುದು. ಯಾರಿಗೆ ಹೃದಘಾತದ ಸೂಚನೆ ಬಂದರೆ ತಕ್ಷಣ ಸಂಬಂಧಿಸಿದ ಔಷಧಿ ನೀಡಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗುವುದು. ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಲಾಖೆ ಹಾಗೂ ವೈದ್ಯರು, ಸಿಬ್ಬಂದಿಯವರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿಯ ಶಿಬಿರಗಳು, ಆರೋಗ್ಯ ಸೇವೆಗಳು ರಾಜ್ಯದ ಹಳ್ಳಿಗಾಡಿನ ಜನರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಕ್ಕೂ ಉಚಿತ ಆರೋಗ್ಯ ಶಿಬಿರಗಳನ್ನ ಕೊಂಡೊಯ್ಯುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಮುಂಜಾಗೃತವಾಗಿ ಕಾಯಿಲೆಗಳನ್ನ ತಡೆಗಟ್ಟುವುದು ಬಹುಮುಖ್ಯ. ಜನರ ಜೀವನ ಶೈಲಿ ಬದಲಾದಂತೆ, ಇವತ್ತಿನ ದಿನಮಾನಗಳಲ್ಲಿ ಬಿ.ಪಿ, ಶೂಗರ್, ಕ್ಯಾನ್ಸರ್, ಕಿಡ್ನಿ ಸಮಸ್ಯೆಯ ಕಾಯಿಲೆಗಳು ಜನರನ್ನ ಕಾಡುತ್ತಿವೆ. ಈ ಕಾಯಿಲೆಗಳನ್ನ ಮೊದಲೇ ಪತ್ತೆ ಹಚ್ಚಿದರೇ, ಚಿಕಿತ್ಸೆ ಮೂಲಕ ಆರಂಭದಲ್ಲೇ ಗುಣಪಡಿಸಬಹುದು. ಹೀಗಾಗಿ ಉಚಿತ ಆರೋಗ್ಯ ಶಿಬಿರಗಳು ಹೆಚ್ವು ಅವಶ್ಯಕವಾಗಿದ್ದು, ಜನಸಾಮಾನ್ಯರಿಗೆ ಹೆಚ್ವು ಸದುಪಯೋಗವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.
ಗಾಂಧಿನಗರ ಆರೋಗ್ಯ ಶಿಬಿರ ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಳ್ಳುವ ಉಚಿತ ಆರೋಗ್ಯ ಶಿಬಿರಗಳಿಗೆ ಒಂದು ಮುನ್ನಿಡಿಯಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದರು. ಬೃಹತ್ ಗಾಂಧಿನಗರ ಆರೋಗ್ಯ ಶಿಬಿರಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆಗಳನ್ನ ಸುವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಬಿ.ಪಿ, ಶೂಗರ್, ಕಣ್ಣಿನ ತಪಾಸಣೆ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿದ್ದರೂ ಇ.ಸಿ.ಜಿ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೇ ಸೂರಿನಡಿ ಆರೋಗ್ಯ ಇಲಾಖೆಯ ಎಲ್ಲ ಚಿಕಿತ್ಸೆಗಳು ಶಿಬಿರದ ಮುಖಾಂತರ ಜನರ ಬಳಿಗೆ ಕೊಂಡುಯ್ಯುವ ನಿಟ್ಟಿನಲ್ಲಿ ಗಾಂಧಿನಗರ ಆರೋಗ್ಯ ಶಿಬಿರ ಮುನ್ನುಡಿ ಬರೆದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.











Click it and Unblock the Notifications