ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ ಆರೋಗ್ಯ ಇಲಾಖೆ

|
Google Oneindia Kannada News

ಬೆಂಗಳೂರು, ಅ.5: ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದ್ದು ಅದರ ಕಡಿವಾಣಕ್ಕೆ ಆರೋಗ್ಯ ಇಲಾಖೆಯು ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ಸಚಿವಾಲಯದ ವಿವಿಧ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿದ ಬೆನ್ನಲ್ಲೇ ಆರೋಗ್ಯ ಇಲಾಖೆಯು ಕೂಡ ಪ್ಲಾಸ್ಟಿಕ್ ನಿಷೇಧಿಸಲು ಚಿಂತನೆ ನಡೆಸಿದೆ. ಇಲಾಖೆವತಿಯಿಂದ ನಡೆಯುವ ಎಲ್ಲಾ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಲೋಟ, ತಟ್ಟೆ, ಬಾಟಲಿಗಳನ್ನು ನಿಷೇಧಿಸುವಂತೆ ಆದೇಶ ಹೊರಡಿಸಿದೆ.

ಪ್ಲಾಸ್ಟಿಕ್ ವಿರುದ್ಧ ಗಾಂಧಿಗಿರಿ: ಪ್ಲಾಗ್ ರನ್‌ಗೆ ನೀವೂ ಹೆಜ್ಜೆ ಹಾಕಿ ಪ್ಲಾಸ್ಟಿಕ್ ವಿರುದ್ಧ ಗಾಂಧಿಗಿರಿ: ಪ್ಲಾಗ್ ರನ್‌ಗೆ ನೀವೂ ಹೆಜ್ಜೆ ಹಾಕಿ

ವಿಧಾನಸೌಧದಲ್ಲಿ ನಡೆಯುವ ಯಾವುದೇ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ತಟ್ಟೆ, ಲೋಟ ಬಳಸಬಾರದು, ಬದಲಿಗೆ ಸ್ಟೀಲ್ ಲೋಟಗಳನ್ನು ಹಾಗೂ ಪುನರ್ ಬಳಕೆ ಮಾಡಬಹುದಾದ 20 ಲೀಟರ್ ಕ್ಯಾನ್ ನಲ್ಲಿ ಮಾಡಬಾರದು ಎಂದು ಕಳೆದ ತಿಂಗಳು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಆದೇಶ ನೀಡಿತ್ತು.

ಪ್ಲಾಸ್ಟಿಕ್ ನಿಂದ ಸಾರ್ವಜನಿಕ ಆರೋಗ್ಯಕ್ಕೆ ಹಾನಿ

ಪ್ಲಾಸ್ಟಿಕ್ ನಿಂದ ಸಾರ್ವಜನಿಕ ಆರೋಗ್ಯಕ್ಕೆ ಹಾನಿ

ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರಕ್ಕೆ ತೀವ್ರ ಹಾನಿ ಉಂಟಾಗಲಿದೆ. ಹೀಗಾಗಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬದಲಿಗೆ ಪರ್ಯಾಯ ಮಾರ್ಗ ಕಂಡುಕೊಳ್ಳುವಂತೆ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸುತ್ತೋಲೆ ಹೊರಡಿಸಿದ್ದಾರೆ.

ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಆರೋಗ್ಯ ಇಲಾಖೆಯು ಗುರುವಾರ ಆದೇಶ ಹೊರಡಿಸಿದ್ದು ಇಲಾಖೆಯಡಿ ನಡೆಯುವ ಯಾವುದೇ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಆದೇಶಿಸಿದೆ.

ಲಾಲ್‌ಬಾಗ್‌ನಲ್ಲಿ ಇನ್ನು ಪ್ಲಾಸ್ಟಿಕ್ ಬ್ಯಾಗ್ ಒಯ್ಯುವ ಹಾಗಿಲ್ಲಾಲ್‌ಬಾಗ್‌ನಲ್ಲಿ ಇನ್ನು ಪ್ಲಾಸ್ಟಿಕ್ ಬ್ಯಾಗ್ ಒಯ್ಯುವ ಹಾಗಿಲ್

20 ಲೀಟರ್ ನೀರಿನ ಕ್ಯಾನ್ ಖರೀದಿಸಬೇಕು

20 ಲೀಟರ್ ನೀರಿನ ಕ್ಯಾನ್ ಖರೀದಿಸಬೇಕು

ಇಲಾಖೆಯ ಮುಖ್ಯಸ್ಥರ ಹಂತದಲ್ಲಿ ನಡೆಯುವ ಸಭೆ ಹಾಗೂ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಕುಡಿಯುವ ನೀರು ಒದಗಿಸುವ ಬದಲು 20 ಲೀ. ಕ್ಯಾನ್ ಗಳನ್ನು ಖರೀದಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಇದನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಸರ್ಕಾರಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನಿಷೇಧ ಅಧಿಕೃತ ಆದೇಶ ಪ್ರಕಟ ಸರ್ಕಾರಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನಿಷೇಧ ಅಧಿಕೃತ ಆದೇಶ ಪ್ರಕಟ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ

ಸರ್ಕಾರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ, ಬಳಕೆ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯ, ನಿಗಮ, ಮಂಡಳಿ ಹಾಗೂ ಸರ್ಕಾರದಿಂದ ಅನುದಾನ ಪಡೆದಿರುವ ಯಾವುದೇ ಸಂಸ್ಥೆಗಳ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ.

ಸರ್ಕಾರಿ ಕಚೇರಿಯಲ್ಲಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆ ನಿಷೇಧಸರ್ಕಾರಿ ಕಚೇರಿಯಲ್ಲಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆ ನಿಷೇಧ

English summary
Department of Health and family welfare had imposed ban on plastic usage and use and throw water bottles in the official functions and events
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X