ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 15ರಿಂದ ರಾಜ್ಯಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15: ರಾಜ್ಯದಲ್ಲಿ ಕೊವಿಡ್ 19 ಪ್ರಕರಣಗಳು ತೀವ್ರವಾಗಿ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಮತ್ತು ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದ್ದು, ಸೆಪ್ಟೆಂಬರ್ 15 ರಿಂದ ಎಲ್ಲಾ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ವೇತನ ಪರಿಷ್ಕರಣೆಗೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ಆರಂಭಿಸಲಿದ್ದಾರೆ. ಅಲ್ಲದೆ ಯಾವುದೇ ರೀತಿಯ ಆರೋಗ್ಯ ಸೇವೆಯಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳದಿರಲು ವೈದ್ಯರು ನಿರ್ಧಾರ ಮಾಡಿದ್ದಾರೆ. ಹೆಲ್ತ್ ರಿಪೋರ್ಟ್ ನೀಡದೇ ಆಸ್ಪತ್ರೆಗಳನ್ನ ಕ್ಲೋಸ್ ಮಾಡಲು ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಇಂದು ಸೋಂಕಿತರಿಗಿಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೇ ಹೆಚ್ಚುಕರ್ನಾಟಕದಲ್ಲಿ ಇಂದು ಸೋಂಕಿತರಿಗಿಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೇ ಹೆಚ್ಚು

ಯಾವುದೇ ರೀತಿಯ ಆನ್‍ಲೈನ್ ಇರಬಹುದು ಆಫ್‍ಲೈನ್ ವರದಿಗಳನ್ನ ಸರ್ಕಾರ ಸಲ್ಲಿಸದಿರಲು ಹಾಗೂ ಕೆಲಸದಲ್ಲಿ ತೊಡಗಿಕೊಳ್ಳದಿರಲು ಸರ್ಕಾರಿ ವೈದ್ಯರ ಸಂಘ ನಿರ್ಧರಿಸಿದೆ. ಸೆಪ್ಟೆಂಬರ್ 15 ಅಂದರೆ ಮಂಗಳವಾರದಿಂದ ರಾಜ್ಯಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ಪಕ್ಕಾ ಆಗಿದ್ದು, ರಾಜ್ಯದಲ್ಲಿ ಸರ್ಕಾರಿ ವೈದ್ಯರು ಕಾರ್ಯ ನಿರ್ವಹಿಸುತ್ತಿಲ್ಲ. ಈ ಹಿಂದೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ.

Health Emergency in Karnataka From September 15

ಯಾವುದೇ ರೀತಿಯ ಆರೋಗ್ಯ ಸೇವೆಯಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳದಿರಲು ವೈದ್ಯರು ನಿರ್ಧಾರ ಮಾಡಿದ್ದಾರೆ. ಹೆಲ್ತ್ ರಿಪೋರ್ಟ್ ನೀಡದೇ ಆಸ್ಪತ್ರೆಗಳನ್ನ ಕ್ಲೋಸ್ ಮಾಡಲು ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನ ಹಾಗೂ ಮಲೇರಿಯಾ, ಜಂತುಹುಳು, ಕುಷ್ಟರೋಗ ಸೇರಿದಂತೆ ಇನ್ನಿತರ ವರದಿಗಳನ್ನ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ ಮಾಡಲಾಗಿದೆ.

ಅಲ್ಲದೆ ಡಿಸಿ ಮತ್ತು ಸಿಇಓ ಮೀಟಿಂಗ್ ಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ.ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರ ಸಂಘ ಈ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಿಂಗಳ 15 ರಿಂದ ಅಂದರೆ ಮಂಗಳವಾರದಿಂದ ವೈದ್ಯಕೀಯ ಸೇವೆ ಮಾಡದೆ, ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರ ಸಂಘ ಈ ನಿರ್ಧಾರ ತೆಗೆದುಕೊಂಡಿದ್ದು, ಮಂಗಳವಾರದಿಂದ ವೈದ್ಯಕೀಯ ಸೇವೆ ಮಾಡದೆ, ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ಹೀಗಾಗಿ ಸೆಪ್ಟೆಂಬರ್ 15 ಅಂದರೆ ಮಂಗಳವಾರದಿಂದ ರಾಜ್ಯಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ಪಕ್ಕಾ ಆಗಿದ್ದು, ರಾಜ್ಯದಲ್ಲಿ ಸರ್ಕಾರಿ ವೈದ್ಯರು ಕಾರ್ಯ ನಿರ್ವಹಿಸುತ್ತಿಲ್ಲ. ಈ ಹಿಂದೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ.

ಮಂಗಳವಾರದಿಂದ ರಾಜ್ಯದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರೇ ಕೊರೊನಾ ಸೇರಿದಂತೆ ಯಾವುದೇ ಹೆಲ್ತ್ ಬುಲೆಟಿನ್ ಸಿಗೋದು ಡೌಟು. ಹಾಗೇ ಕೊವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ.

Recommended Video

Hindi Diwas ವಿಚಾರವಾಗಿ ಗರಂ ಆದ್ರು Dinesh Gundurao | Oneindia Kannada

ರಾಜ್ಯದಲ್ಲಿ ಸಾವು ನೋವು ಹೆಚ್ಚಾಗಬಹುದು. ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ. ಡಿಸಿ ಮತ್ತು ಸಿಇಓ ಮೀಟಿಂಗ್ ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಭಾಗವಹಿಸದಿದ್ದರೇ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಕಷ್ಟಸಾಧ್ಯವಾಗುತ್ತದೆ.

English summary
Doctors Will Protest Against Government and declared Health emergency in Karnataka From September 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X