ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಆದಷ್ಟು ಶೀಘ್ರವೇ ಎಲ್ಲರಿಗೂ ಕೊರೊನಾ ಲಸಿಕೆ; ಆರೋಗ್ಯ ಸಚಿವರ ಭರವಸೆ

|
Google Oneindia Kannada News

ಬೆಂಗಳೂರು, ಜೂನ್ 5: ರಾಜ್ಯದಲ್ಲಿ ಈವರೆಗೆ 1784 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನು ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು.

Recommended Video

ಮೊದಲ ಡೋಸ್‌ ಲಸಿಕೆ ಪಡೆದ 124 ವರ್ಷದ ಅಜ್ಜಿ! ಯುವಕರಿಗೆ ಸ್ಪೂರ್ತಿ ಇವರ ಆತ್ಮಸ್ಥೈರ್ಯ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಈಗಾಗಲೇ 62 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದರು.

Health Minister Assures Corona Vaccines For All As Soon As Possible In State

ಕಪ್ಪು ಶಿಲೀಂಧ್ರ ಸೋಂಕಿಗೆ ಆಂಫೊಟೆರಿಸಿನ್ ಬಿ ಔಷಧಿ ಬೇಕಾಗುತ್ತದೆ. ಕೇಂದ್ರ ಸರ್ಕಾರವು 9,750 ವೈಲ್ ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಇದರಲ್ಲಿ 8,860 ವೈಲ್ ಶುಕ್ರವಾರ ಬಂದಿದೆ. ಒಟ್ಟು 18,650 ವೈಲ್ ಗಳು ರಾಜ್ಯಕ್ಕೆ ದೊರೆತಿವೆ. ಸರ್ಕಾರಿ ಆಸ್ಪತ್ರೆಗಳಿಗೆ 8,860 ವೈಲ್ ಗಳನ್ನು ಬಳಸಲಾಗಿದೆ. ಖಾಸಗಿ ಆಸ್ಪತ್ರೆಗಳು ಸೇರಿ ಬೇರೆ ಕಡೆಗಳಿಗೆ 9,740 ವೈಲ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆದಷ್ಟು ಶೀಘ್ರವೇ ಎಲ್ಲರಿಗೂ ಕೊರೊನಾ ಲಸಿಕೆ: ಕೋವಿಡ್ ಲಸಿಕೆಯ 58 ಲಕ್ಷ ಡೋಸ್ ಗಳನ್ನು ನೀಡಲಾಗುವುದು. 70-75 ಲಕ್ಷ ಜನರಿಗೆ ಇದೇ ತಿಂಗಳಲ್ಲಿ ಲಸಿಕೆ ಹಾಕಲಾಗುವುದು. ರಾಜ್ಯದಲ್ಲಿ ಈವರೆಗೆ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜೂನ್ ಅಂತ್ಯಕ್ಕೆ ರಾಜ್ಯದ 2.25 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು. ಆದಷ್ಟು ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ದೊರೆಯಲಿದೆ ಎಂದರು.

ಕರ್ನಾಟಕದಲ್ಲಿ ಐತಿಹಾಸಿಕ ರೀತಿಯಾಗಿ ವೈದ್ಯರ ನೇಮಕ: ಸಚಿವ ಸುಧಾಕರ್

ಆಯುಷ್ಮಾನ್ ಭಾರತ್ ನಡಿ ಚಿಕಿತ್ಸೆಗೆ ಚರ್ಚೆ:
ಮಧ್ಯಮ ವರ್ಗದವರು, ಬಡವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು ಶಿಲೀಂಧ್ರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಹಿಂದೆಯೇ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಒಬ್ಬರಿಗೆ 2-3 ಲಕ್ಷ ರೂ. ಖರ್ಚಾಗಲಿದ್ದು, ಸರ್ಕಾರವೇ ಭರಿಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಉಚಿತವಾಗಿ ನೀಡಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕದಡಿ ಚಿಕಿತ್ಸೆ ನೀಡಬೇಕೆಂದು ಸಲಹೆ ಬಂದಿದೆ. ಈ ಕುರಿತು ಮಾತುಕತೆ ನಡೆಸಲಾಗುವುದು ಎಂದರು.

ಜೂನ್ ಅಂತ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಬಹುದು. ಆದರೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಮನವಿ ಮಾಡಿದರು.

ಒಂದೂವರೆ ಕೋಟಿ ಕೋವಿಡ್ ಲಸಿಕೆ ಉಚಿತವಾಗಿಯೇ ನೀಡಿದ್ದೇವೆ. ಹೆಪಟೈಟಿಸ್ ಬಿ ಲಸಿಕೆ 1982 ರಲ್ಲಿ ಪರಿಚಯವಾದರೂ, ಭಾರತಕ್ಕೆ 2002ರಲ್ಲಿ ಬಂತು. ಒಂದು ಲಸಿಕೆ ಬರಲು 20 ವರ್ಷ ಬೇಕಾಯಿತು. ಕೊರೊನಾ ಲಸಿಕೆ ದೇಶೀಯವಾಗಿಯೇ ತಯಾರಾಗಿದೆ. ಇದರಲ್ಲೂ ರಾಜಕಾರಣ ಮಾಡಿದರೆ ಜನರೇ ಛೀಮಾರಿ ಹಾಕುತ್ತಾರೆ ಎಂದರು.

English summary
Corona vaccines will be available to all as soon as possible in state, assures Health minister K Sudhakar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X