• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆರೋಗ್ಯ ಸಚಿವ ಶ್ರೀರಾಮುಲುಗೆ ಮಾತೃವಿಯೋಗ

|

ಬೆಂಗಳೂರು, ಆಗಸ್ಟ್ 21: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಕೊನೆಯುಸಿರೆಳೆದರು.

   ಸ್ಯಾಟಲೈಟ್ ನಲ್ಲಿ ಸೆರೆಯಾಯ್ತು Chinese ಮತ್ತೊಂದು ಮಂಗನಾಟ | Oneindia Kannada

   ಅವರು ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಳ್ಳಾರಿಯ ತಮ್ಮ ಮನೆಗೆ ಮರಳಿದ್ದರು. ಆದರೆ ವಯೋಸಹಜ ತೊಂದರೆಗಳಿಂದ ಅವರು ಮೃತಪಟ್ಟಿದ್ದಾರೆ.

   ತಾಯಿಯ ಅಗಲುವಿಕೆಯ ದುಃಖದ ಸಂಗತಿಯನ್ನು ಸಚಿವ ಶ್ರೀರಾಮುಲು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ.

   ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

   ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಾತೃಶ್ರೀ ರವರು ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಸಂತಾಪ ವ್ಯಕ್ತಪಡಿಸಿದ್ದಾರೆ.

   English summary
   Health Minister B Sriramulu's mother Honnuramma passed away on Thursday night due to age related issues.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X