'ಬಿಜೆಪಿ ಅಸಲಿ ಮುಖವೇ ಇದು‌': ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ ವಿರುದ್ಧ ಕಿಡಿ

ಬೆಂಗಳೂರು, ಆಗಸ್ಟ್‌ 13: ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಕೊಲೆ ಪ್ರಕರಣದ ಆರೋಪಿ‌ಯು ಬಿಜೆಪಿ ಮುಖಂಡ ಪ್ರತಾಪ್ ಸಿಂಹ‌ ಸ್ನೇಹಿತ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಯನ್ನು ಕಾಂಗ್ರೆಸ್‌ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ನಿನ್ನೆ ಆಗಸ್ಟ್ 12 ರಂದು ನವೀನ್ ಕುಮಾರ್ ಅನ್ನು ಭೇಟಿಯಾಗಿರುವ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡು, 'ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ ಆರೋಪಿ-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು, ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ. ಮದ್ದೂರಿನ ಯುವ ಸ್ನೇಹಿತರೂ ಜೊತೆಗಿದ್ದರು' ಎಂದು ಬರೆದುಕೊಂಡಿದ್ದಾರೆ.

Health Minister Dinesh Gundu Rao Lashes Out At BJP Former MP Prathap Simha

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಯ ವಿರುದ್ಧ ಕಿಡಿಕಾರಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಪ್ರತಾಪ್ ಸಿಂಹ ಹಾಗೂ ನವೀನ್ ಕುಮಾರ್ ಫೋಟೋ ಹಂಚಿಕೊಂಡು, ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ'ತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ತನ್ನ ಗೆಳೆಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೊಂಡಿದ್ದಾರೆ. ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌. ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ‌ ಎಂಬುವುದಕ್ಕೆ ಇದೊಂದು ನಿದರ್ಶನ'.

Health Minister Dinesh Gundu Rao Lashes Out At BJP Former MP Prathap Simha

'ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶ್‌ರವರನ್ನು ನಿಷ್ಕಾರಣವಾಗಿ ಕೊಲೆಗೈದ ಆರೋಪಿಯ ಕೃತ್ಯವನ್ನು ಬಿಜೆಪಿಯ ಮಾಜಿ ಸಂಸದರು ಖಂಡಿಸುವ ಬದಲು, ಆ ಆರೋಪಿಯ ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆಸಿಕೊಂಡರೆ ಸಮಾಜಕ್ಕೆ ಯಾವ ಸಂದೇಶ ಹೋಗುತ್ತದೆ..?' ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಇನ್ನು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಕುಮಾರ್ ಆರೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠವು ಜುಲೈ 16ರಂದು ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜಾಮೀನು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+