ರಾಕೇಶ್ ಸಿದ್ದರಾಮಯ್ಯ ಹೆಸರಲ್ಲಿ ಆರೋಗ್ಯ ಯೋಜನೆ ಜಾರಿ?

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 15 : ಯಕೃತ್ ಕಸಿ ಯೋಜನೆಗೆ ಸರ್ಕಾರದಿಂದ ನೆರವು ನೀಡಲು ರಾಕೇಶ್ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವ ಸಾಧ್ಯತೆ ಇದೆ.

ಸೋಮವಾರ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 219ನೇ ಜಯಂತಿ ಅಂಗವಾಗಿ ಮೆಜೆಸ್ಟಿಕ್‌ನ ಖೋಡೆಸ್ ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು.[ಕರಳು ಬೇನೆ ಕಾಯಿಲೆಗೆ ಬಲಿಯಾದ ರಾಕೇಶ್ ಸಿದ್ದರಾಮಯ್ಯ]

Health scheme may announce in the name of Rakesh Siddaramaiah

ಈ ಸಂದರ್ಭದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ವಾಟಾಳ್ ನಾಗರಾಜ್ ಅವರು, 'ರಾಕೇಶ್ ಸಿದ್ದರಾಮಯ್ಯ ಹೆಸರಿನಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವಂತೆ' ಸಿದ್ದರಾಮಯ್ಯಗೆ ಸಲಹೆ ನೀಡಿದರು.[ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, 'ಬಡ ಜನರ ಯಕೃತ್ ಹಾಗೂ ಪಿತ್ತ ಜನಕಾಂಗ ಕಸಿ ಯೋಜನೆಗೆ ಹೊಸ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸುವುದಾಗಿ' ಹೇಳಿದರು.[ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು]

Health scheme may announce in the name of Rakesh Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ ಸಿದ್ದರಾಮಯ್ಯ (39) ಅವರು ಕರಳುಬೇನೆ ಕಾಯಿಲೆಗೆ ತುತ್ತಾಗಿ ಚೇತರಿಕೆ ಕಾಣದೆ ಜುಲೈ 31ರಂದು ವಿಧಿವಶರಾಗಿದ್ದರು. ಬೆಲ್ಜಿಯಂನ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಅಲ್ಲಿಯೇ ಸಾವನ್ನಪ್ಪಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah may announce health scheme in the name of Rakesh Siddaramaiah. Rakesh Siddaramaiah passed away on July 30, 2016 due to multiple organ failure.
Please Wait while comments are loading...