• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಆರೋಗ್ಯ ವ್ಯವಸ್ಥೆಯಲ್ಲಿ ಸುಧಾರಣೆ: ಆರೋಪಗಳಿಂದ ಸಿಬ್ಬಂದಿ ಬಲ ಕುಗ್ಗಿಸಬಾರದು: ಸುಧಾಕರ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 05: ಕೋವಿಡ್ ಸಾಂಕ್ರಾಮಿಕ ಎದುರಿಸುವ ಜೊತೆಗೆ ಮಾನವ ಸಂಪನ್ಮೂಲ ಕೊರತೆ ನೀಗಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಅಗತ್ಯ ಸೌಲಭ್ಯ ನೀಡಲಾಗುತ್ತಿದ್ದರೂ ಸಹ ಸಣ್ಣಪುಟ್ಟ ನ್ಯೂನ್ಯತೆಗಳನ್ನೇ ದೊಡ್ಡದಾಗಿಸುವುದು, ಆ ಮೂಲಕ ಆರೋಗ್ಯ ಸಿಬ್ಬಂದಿಯ ಬಲ ಕುಗ್ಗಿಸುವುದು ಸರಿಯಲ್ಲ. ವಿನಾಕಾರಣ ಆರೋಪ ಮಾಡುವುದು ಆರೋಗ್ಯ ಸಿಬ್ಬಂದಿಗೆ ಅಪಮಾನ ಮಾಡಿದಂತೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ರಾಜ್ಯ ಆರೋಗ್ಯ ವ್ಯವಸ್ಥೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ನ್ಯೂನ್ಯತೆಗಳೇ ಇಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ಆ ನ್ಯೂನ್ಯತೆಗಳನ್ನೇ ದೊಡ್ಡದಾಗಿ ಬಿಂಬಿಸಿ ಇಡೀ ವ್ಯವಸ್ಥೆಯೇ ಸರಿಯಿಲ್ಲ ಎಂದು ವ್ಯಾಖ್ಯಾನಿಸಿವುದು ತಪ್ಪು. ಇದು ಸಾವಿರಾರು ಪ್ರಾಮಾಣಿಕ ವೈದ್ಯರು, ನರ್ಸಿಂಗ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಡುವ ಅಪಮಾನವಾಗಿದೆ ಎಂದು ಅಭಿಪ್ರಾಯಪಟ್ಟರು.

Breaking: ಜಗತ್ತಿನ ಮೊದಲ ಕೋವಿಡ್-19 ನಾಸಲ್ ಲಸಿಕೆಗೆ ಅನುಮೋದನೆ Breaking: ಜಗತ್ತಿನ ಮೊದಲ ಕೋವಿಡ್-19 ನಾಸಲ್ ಲಸಿಕೆಗೆ ಅನುಮೋದನೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ಮೇಲೆ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಸುಧಾರಣೆ ಕಂಡಿದೆ ನಾನು ಹೇಳುವುದಿಲ್ಲ. ಆದರೆ ಆ ದಿಕ್ಕಿನಲ್ಲಿ ಹಿಂದೆಂದಿಗಿಂತಲೂ ಸಾಕಷ್ಟು ಹೆಜ್ಜೆಗಳನ್ನು ಇಟ್ಟಿದ್ದೇವೆ ಎನ್ನುವುದು ಮಾತ್ರ ವಾಸ್ತವ. ಇದರ ಬಗ್ಗೆ ವಸ್ತುನಿಷ್ಠ ವಿಮರ್ಶೆಯ ಅವಶ್ಯಕತೆ ಇದೆ ಎಂದರು.

ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಪರಿಣಾಮಕಾರಿ ಆಗಿಲ್ಲದಿದ್ದರೆ ಶತಮಾನದ ಅತ್ಯಂತ ಭೀಕರ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸಲಾಗುತ್ತಿತ್ತೇ?. ಸರ್ಕಾರ ಆರೋಗ್ಯ ಕ್ರಮಗಳಿಂದಲೇ ಇಂದು ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಕೆಲವೇ ತಿಂಗಳುಗಳಲ್ಲಿ 12 ಕೋಟಿ ಡೋಸ್ ಲಸಿಕೆ ವಿತರಿಸಲು ಸಾಧ್ಯವಾಗಿದೆ ಎಂದು ಆರೋಗ್ಯ ವ್ಯವಸ್ಥೆ ಕುರಿತು ಟೀಕಿಸುವವರಿಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಆರೋಗ್ಯ ಯೋಜನೆಯಡಿ 36.38 ಲಕ್ಷ ಜನರಿಗೆ ಚಿಕಿತ್ಸೆ

ಆರೋಗ್ಯ ಯೋಜನೆಯಡಿ 36.38 ಲಕ್ಷ ಜನರಿಗೆ ಚಿಕಿತ್ಸೆ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕಳೆದ 5 ವರ್ಷಗಳಲ್ಲಿ ರಾಜ್ಯದ 36.38 ಲಕ್ಷ ಜನ ಒಟ್ಟು 4,620.20 ಕೋಟಿ ರೂಪಾಯಿ ಮೊತ್ತದ ಚಿಕಿತ್ಸೆ ಉಚಿತವಾಗಿ ಪಡೆದಿದ್ದಾರೆ. ಕೊರೋನಾ ಸಂದರ್ಭದಲ್ಲಿ ಇಂಥದ್ದೊಂದು ಯೋಜನೆ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ಊಹಿಸಲು ಸಾಧ್ಯವಿಲ್ಲ.

ದಶಕಗಳಿಂದ ನಿರ್ಲಕ್ಷ್ಯಗೊಂಡಿದ್ದ ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಬಲಪಡಿಸಲು ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 436 ನಮ್ಮ ಕ್ಲಿನಿಕ್ ತೆರೆಯಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆಯುಷ್ಮಾನ್ ಭಾರತ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೇ ಏರಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು.

1,763 ವೈದ್ಯರು ಹಾಗೂ ವೈದ್ಯಾಧಿಕಾರಿ ನೇಮಕ

1,763 ವೈದ್ಯರು ಹಾಗೂ ವೈದ್ಯಾಧಿಕಾರಿ ನೇಮಕ

ಹಿಂದಿನ ಯಾವುದೇ ಸರ್ಕಾರಗಳು ಮಾಡದಷ್ಟು ವೈದ್ಯರ ನೇಮಕಾತಿಯನ್ನು ಬಿಜೆಪಿ ಸರ್ಕಾರ ಮಾಡಿದೆ. ಕಳೆದ ವರ್ಷವಷ್ಟೇ ಐತಿಹಾಸಿಕವಾಗಿ 1,763 ವೈದ್ಯರು ಹಾಗೂ ವೈದ್ಯಾಧಿಕಾರಿಗಳನ್ನು ನೇರ ನೇಮಕ ಮಾಡಲಾಗಿದೆ. ಇದರಲ್ಲಿ 715 ತಜ್ಞರು, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳು ಭರ್ತಿ ಆಗಿವೆ. ಇಂತಹ ಮಹತ್ವದ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಬಹುತೇಕ ನೀಗಿದೆ. ಅದಲ್ಲದೆ ಗುತ್ತಿಗೆ ಆಧಾರದಲ್ಲೂ ಸುಮಾರು 2,000 ವೈದ್ಯರು ಕಾರ್ಯನಿರ್ವಹಿಸುವಂತಾಗಿದೆ. ಈ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೊರತೆಯ ಪ್ರಮಾಣವನ್ನು ಗಣನೀಯವಾಗಿ ನೀಗಿಸಲಾಗಿದೆ ಎಂದು ಅವರು ವಿವರಿಸಿದರು.

ಹೊಸ ವೈದ್ಯಕೀಯ ಕಾಲೇಜುಗಳಿಂದ 700ಸೀಟು ಲಭ್ಯ

ಹೊಸ ವೈದ್ಯಕೀಯ ಕಾಲೇಜುಗಳಿಂದ 700ಸೀಟು ಲಭ್ಯ

ಬಿಜೆಪಿ ಅಧಿಕಾರಕ್ಕೆ ಬಂದು ಕೆಲವು ವರ್ಷಗಳಲ್ಲಿ ರಾಜ್ಯದ ಹಾವೇರಿ, ಚಿಕ್ಕಮಗಳೂರು, ಯಾದಗಿರಿ ಹಾಗೂ ಚಿಕ್ಕಬಳ್ಳಾಪುರಗಳಲ್ಲಿ ನಾಲ್ಕು ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗುತ್ತಿವೆ. ಇದರಿಂದ ಕರ್ನಾಟಕದಲ್ಲಿ 700ಕ್ಕೂ ಅಧಿಕ ಎಂಬಿಬಿಎಸ್ ಸೀಟುಗಳು ಬಡ ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ.

ಹೋಬಳಿ ಮಟ್ಟದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ ಜಿಲ್ಲಾ ಆಸ್ಪತ್ರೆಗಳ ಒತ್ತಡ ಕಡಿಮೆ ಮಾಡಲಾಗುತ್ತಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೇವೆಯನ್ನು ಉತ್ತಮಪಡಿಸಿದ್ದು, ದಿನಕ್ಕೆ 30,000 ಇದ್ದ ಸಾಮರ್ಥ್ಯವನ್ನು 60,000ಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಆರೋಗ್ಯ ಸಿಬ್ಬಂದಿ ಬಲ ಕುಗ್ಗಿಸಬಾರದು

ಆರೋಗ್ಯ ಸಿಬ್ಬಂದಿ ಬಲ ಕುಗ್ಗಿಸಬಾರದು

ಖಾಲಿ ಹುದ್ದೆಗಳ ಭರ್ತಿ, ಮೂಲ ಸೌಕರ್ಯಗಳು ಐದಾರು ಪಟ್ಟು ಹೆಚ್ಚಳ, ಸಿಬ್ಬಂದಿಗಳ ಶಿಸ್ತುಪಾಲನೆ, ಹೊಣೆಗಾರಿಕೆ ಹೆಚ್ಚಳ ಸೇರಿದಂತೆ ಪ್ರಾಥಮಿಕ, ದ್ವಿತೀಯ ಹಾಗೂ ತೃತೀಯ ಎಲ್ಲ ಹಂತಗಳಲ್ಲಿಯೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಹೆಚ್ಚು ಜನಸ್ನೇಹಿ ಮಾಡಲು ಕಳೆದ ಎರಡೂವರೆ ವರ್ಷದಿಂದ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಡ, ಕೆಳ-ಮಧ್ಯಮ ವರ್ಗದ ಜನರಿಗೆ ಸಂಜೀವಿನಿಯಾಗಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಸ್ತುನಿಷ್ಠ ವಿಮರ್ಶೆ, ರಚನಾತ್ಮಕ ಸಲಹೆ ಸ್ವಾಗತಾರ್ಹ. ಆದರೆ ರಾಜಕೀಯ ಲಾಭಕ್ಕಾಗಿ ನಕಾರಾತ್ಮಕ ಚಿತ್ರಣವನ್ನು ಬಿಂಬಿಸುವ ವ್ಯಾಖ್ಯಾನಗಳು ಜನರಿಗೆ ಎಸಗುವ ದ್ರೋಹ, ಪ್ರಾಮಾಣಿಕ ಸಿಬ್ಬಂದಿಗಳ ಮನೋಬಲ ಕುಗ್ಗಿಸುವ ಪಾಪದ ಕೆಲಸವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಡಾ. ಕೆ. ಸುಧಾಕರ್
Know all about
ಡಾ. ಕೆ. ಸುಧಾಕರ್
English summary
Karnataka Health system has been improved by BJP Government, health workers should not be blamed and reduced in strength, Health minister Dr. K Sudhakar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X