Breaking; ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ
ಬೆಂಗಳೂರು, ಸೆಪ್ಟೆಂಬರ್ 06: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಚಿವರ ಆರೋಗ್ಯದ ಕುರಿತು ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
1985ರಲ್ಲಿ ರಾಜಕೀಯ ಪ್ರವೇಶ ಮಾಡಿದ ಉಮೇಶ್ ಕತ್ತಿ 8 ಬಾರಿ ಶಾಸಕರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಅರಣ್ಯ ಇಲಾಖೆ ಸಚಿವರಾಗಿದ್ದಾರೆ.
8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಆರು ಬಾರಿ ಪಕ್ಷವನ್ನು ಬದಲಾವಣೆ ಮಾಡಿದ್ದಾರೆ. 2004ರ ಚುನಾವಣೆಯಲ್ಲಿ 821 ಮತಗಳ ಅಂತರದಿಂದ ಒಂದು ಬಾರಿ ಮಾತ್ರ ಉಮೇಶ್ ಕತ್ತಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.












Click it and Unblock the Notifications