Get Updates
Get notified of breaking news, exclusive insights, and must-see stories!

Heart Attack: ಕೊರೊನಾ ಬಂದವರಲ್ಲೇ ಹೆಚ್ಚು ಹೃದಯಾಘಾತ; ಆರೋಗ್ಯ ಸಚಿವರ ಶಾಕಿಂಗ್ ಮಾಹಿತಿ

ಬೆಂಗಳೂರು, ಜುಲೈ 07: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸಾಲು ಸಾಲು ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಹೃದಯಾಘಾತಕ್ಕೆ ಸಂಬಂಧಿಸಿದ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಸ್ಪೋಟಕ ಮಾಹಿತಿಯನ್ನ ನೀಡಿದ್ದಾರೆ.

ಈ ಕುರಿತು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಹೃದಯಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಆದರೆ, ಕೋವಿಡ್ಗೆ ತುತ್ತಾದವರಲ್ಲೇ ಹೃದಯಾಘಾತ ಪ್ರಕರಣ ಹೆಚ್ಚಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶಾಕಿಂಗ್‌ ಮಾಹಿತಿ ನೀಡಿದ್ದಾರೆ. ಕೋವಿಡ್-19 ನಿಂದ ಗುಣಮುಖರಾದವರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿವೆ. ಹೃದಯಾಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು ಎಂದು ಹೇಳಿದರು.

Heart attacks in the state are caused by Covid not the vaccine Dinesh Gundu Rao

ಕೋವಿಡ್ ಆದವರಿಗೆ ಹೃದಯಘಾತ ಆಗಿದ್ದು ಕಂಡು ಬಂದಿದೆ. ಆದರೆ ಲಸಿಕೆಯಿಂದ ಹೃದಯಘಾತವಾಗಿಲ್ಲ. ಕೋವಿಡ್ ಪರಿಣಾಮ ಸಾರ್ವಜನಿಕರ ಮೇಲೆ ಆಗಿದೆ. ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಆದರೆ ಕೋವಿಡ್ ಲಸಿಕೆ ಇದಕ್ಕೆ ಕಾರಣವಲ್ಲ. MRNA ವಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಕೋವಿಡ್ ನ ಲಸಿಕೆಯಿಂದ ನಮ್ಮ ಜನರಿಗೆ ಅನುಕೂಲ ಆಗಿದೆ. ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ. ಹೃದಯಾಘಾತ ಸಂಬಂಧ ಸಂಶೋಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಕೋವಿಡ್ ಹಾಗೂ ಕೋವಿಡ್ ಲಸಿಕೆಯ ದುಷ್ಪರಿಣಾಮ ಏನು? ಲಸಿಕೆಯಿಂದ ಹೃದಯಾಘಾತ ಆಗುತ್ತಿದೆಯಾ ಎಂಬುವುದರ ಬಗ್ಗೆ ವರದಿ ಕೇಳಿದ್ದರು. ಇಲಾಖೆಯ ಮುಖ್ಯ ಕಾರ್ಯದರ್ಶಿ ತಾಂತ್ರಿಕ ಸಲಹಾ ಸಮಿತಿ ಕೂಡ ರಚನೆ ಮಾಡಿದರು.ಡಾಕ್ಟರ್ ರವೀಂದ್ರನಾಥ್ ನೇತೃತ್ವದಲ್ಲಿ ತನಿಖಾ ತಂಡ ರಚನೆಯಾಗಿತ್ತು. ಕೋವಿಡ್ ಪಾಸಿಟಿವ್ ಬಂದವರಲ್ಲಿ ಕೆಲವರಿಗೆ ಹೃದಯಘಾತವಾಗಿದೆ. ಆದರೆ ಇದು ಲಸಿಕೆಯಿಂದ ಅಲ್ಲ ಕೋವಿಡ್ ನಿಂದ ಆಗಿರುವುದು ಕೋವಿಡ್ ಗಿಂತ ಮುಂಚೆ ಕೋವಿಡ್ ಆದ್ಮೇಲೆ ಸಾಕಷ್ಟು ಬದಲಾವಣೆ ಆಗಿದೆ. ಕೊರೊನಾ ನಂತರ ಸಕ್ಕರೆ ಕಾಯಿಲೆಯೂ ಸಹ ಹೆಚ್ಚಾಗಿ ಕಂಡುಬಂದಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+