Temperature: ಅತಿಯಾದ ತಾಪಮಾನದಿಂದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಸರ್ಕಾರದ ಸಲಹೆಗಳು
ಬೆಂಗಳೂರು, ಏಪ್ರಿಲ್.03: ದೇಶದಲ್ಲಿ ಮಳೆಯಿಲ್ಲದೆ ತಾಪಮಾನ (Heat wave) ಹೆಚ್ಚುತ್ತಲೆ ಇದೆ. ಭಾರತ ಹವಾಮಾನ ಇಲಾಖೆ ಕೂಡ ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕುರಿತು ಮೂನ್ಸೂಚನೆ ಬಿಡುಗಡೆ ಮಾಡಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸಿದೆ.
ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯರು ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ - ಮೇ ತಿಂಗಳಲ್ಲಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿದೆ. ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಅತೀ ಹೆಚ್ಚು ತಾಪಮಾನದ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆ ನೀಡಿದೆ.

ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು
* ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ)
* ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು.
* ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು.
* ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.
* ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).
* ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.
* ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
* ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
* ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.
* ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು.
* ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.
* ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
* ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್ಗಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು. ಹಾಗೂ ಆಗಿಂದಾಗೆ ತಣ್ಣೀರು ಸ್ನಾನ ಮಾಡುವುದು.
* ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ನವರ್, ಹ್ಯಾಂಡ್ನವಲ್, ಹ್ಯಾಂಡ್ಯಾನ್, ಎಲೆಕ್ಟೋಲೈಟ್ / ಗ್ಲೋಕೋಸ್ / ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.

ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು
* ಶಾಖ ಸೆಳೆತಗಳು: ಊತ ಮತ್ತು ಮೂರ್ಛೆ. ಸಾಮಾನ್ಯವಾಗಿ 39 ° C ಅಂದರೆ 102 °F ಗಿಂತ ಕಡಿಮೆ ಜ್ವರ.
* ಶಾಖದ ಬಳಲಿಕೆ: ಆಯಾಸ, ದೌರ್ಭಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.
* ಶಾಖಾಘಾತ : ದೇಹದ ಉಷ್ಣತೆಯು 40 ° C ಅಂದರೆ 104 ° F ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪುಜ್ಞೆ ತಪ್ಪುವುದು.
ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ
* ಬಿಸಿಲಿನಿಂದ ತತ್ತರಿಸಿದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.
* ನೀರು ಅಥವಾ ಓಆರ್‌ಎಸ್, ನಿಂಬೆ ಪಾನಕ ನೀಡುವುದು, ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.
* ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು.
* ಮದ್ಯ ಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.












Click it and Unblock the Notifications