ಬೇಸಿಗೆಯಲ್ಲಿ ಶುರುವಾಗಲಿವೆ ಸಾಂಕ್ರಾಮಿಕ ರೋಗಗಳು: ತಡೆಗಟ್ಟುವುದು ಹೇಗೆ?
ಬೆಂಗಳೂರು, ಏಪ್ರಿಲ್. 08: ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಗಳ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆ ನಡೆಯುತ್ತಲೆ ಇರುತ್ತವೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ (ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ.
ಹೀಗಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಉಲ್ಬಣಗೊಳ್ಳದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆರೋಗ್ಯದ ಮೇಲೆ ಕಾಳಜಿ ವಹಿಸಬೇಕಿದೆ. ಇದಕ್ಕಾಗಿ ತಾವು ತೆಗೆದುಕೊಳ್ಳುವ ಆಹಾರ, ನೀರು ಪ್ರತಿಯೊಂದರಲ್ಲಿ ಮುಂಜಾಗ್ರತೆ ವಹಿಸುವುದು ಮುಖ್ಯ. ಅವುಗಳನ್ನು ನೋಡೊಣ.

* ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು.
* ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸಬೇಕು ಮತ್ತು ಹೋಟೆಲ್‌ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.
* ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು.
* ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪರೀಕ್ಷೆ ನಡೆಸಿದ ನೀರಿನ ಮೂಲಗಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಯೋಗಶಾಲೆಯಲ್ಲಿ ನಿರ್ವಹಣೆ ಮಾಡಬೇಕು.
* ಕುಡಿಯಲು ಯೋಗ್ಯವಲ್ಲವೆಂದು ಧೃಢಪಟ್ಟ ನೀರಿನ ಮೂಲಗಳನ್ನು ಕೂಡಲೇ ಸಂಬಂಧಪಟ್ಟ ಪಂಚಾಯತ್ ಪಿಡಿಒಗಳ ಸಹಕಾರದೊಂದಿಗೆ ಸ್ವಚ್ಚಗೊಳಿಸಿ ಕ್ಲೋರಿನೇಷನ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕ್ರಮವಹಿಸಬೇಕು.
* ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಹೋಗಿದ್ದರೆ ತಕ್ಷಣ ಸಂಬಂದಪಟ್ಟ ನಗರ ಪಾಲಿಕೆ, ಪಟ್ಟಣ ಪಂಚಾಯತ್, ಪುರಸಭೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು.
* ವಾಟರ್ ಮ್ಯಾನ್‌ಗಳಿಗೆ ಕ್ಲೋರಿನೇಷನ್ ಮಾರ್ಗಸೂಚಿಯನ್ನು ಆರೋಗ್ಯ ಇಲಾಖಾ ವತಿಯಿಂದ ನೀಡಬೇಕು.
* ಸ್ಥಳೀಯ ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್ ಮತ್ತು ಅಂಗಡಿಗಳ ತಪಾಸಣೆ ನಡೆಸಿ ಆಹಾರ ಮತ್ತು ನೀರಿನ ಗುಣಮಟ್ಟದ ಸುರಕ್ಷತೆಯ ಬಗ್ಗೆ ಕ್ರಮವಹಿಸಬೇಕು.
* ಮನೆ ಭೇಟಿ ಸಮೀಕ್ಷೆಯಲ್ಲಿ ವೈಯುಕ್ತಿಕ ಶುಚಿತ್ವ, ಪರಿಸರ ನೈರ್ಮಲ್ಯ, ಶುದ್ದ ಕುಡಿಯುವ ನೀರು, ಬಿಸಿಯಾದ ಆಹಾರ ಸೇವನೆ, ರಸ್ತೆ/ಬೀದಿ ಬದಿಯಲ್ಲಿ ಕತ್ತರಿಸಿ ಮಾರಾಟ ಮಾಡುವ ಹಣ್ಣು-ಹಂಪಲುಗಳನ್ನು ತೆರೆದ ಆಹಾರ ಪದಾರ್ಥಗಳನ್ನು ಸೇವಿಸದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು.
* ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವಾಗ ಮತ್ತು ಸೀನುವಾಗ ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.
* ಸೂಕ್ತ ಚಿಕಿತ್ಸೆಗಾಗಿ ಅಗತ್ಯವಾದ ಜೀವರಕ್ಷಕ ಔಷಧಿಗಳು ಹಾಗೂ ಕ್ರಿಮಿ-ಕೀಟನಾಶಕಗಳನ್ನು ಎಲ್ಲಾ ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು.
* ಜಾತ್ರೆ, ಊರುಸ್ ಹಾಗೂ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ಮಾಹಿತಿ, ವಸ್ತು ಮಾಹಿತಿ ಶಿಕ್ಷಣ ಸಂವಹನ ಪ್ರದರ್ಶನ ಏರ್ಪಡಿಸಿ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಶಿಕ್ಷಣ ನೀಡಬೇಕು.
* ನಿರ್ದಿಷ್ಟವಾದ ರೋಗ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗದಂತೆ ಹಾಗೂ ಸಾವು-ನೋವುಗಳು ಉಂಟಾಗದಂತೆ ಕ್ರಮವಹಿಸಬೇಕು.
* ಸಾರ್ವಜನಿಕರು ಇದ್ದಕ್ಕೆ ಸಂಬಂಧಪಟ್ಟ ಇಲಾಖೆಯವರ ಜೊತೆಗೆ ಸಹಕರಿಸಬೇಕು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications