Get Updates
Get notified of breaking news, exclusive insights, and must-see stories!

ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿಗಳಿಂದ ತಹಸೀಲ್ದಾರಿಗೆ ವಿಶೇಷ ಸೂಚನೆ

ಬೆಂಗಳೂರು, ಏಪ್ರಿಲ್. 10: ಅತೀ ಹೆಚ್ಚು ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನಾರೋಗ್ಯ ತಡೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳತ್ತ ಕೂಡಲೇ ಗಮನ ಹರಿಸಬೇಕು ಎಂದು ಎಲ್ಲಾ ತಾಲೂಕಿನ ತಹಸಿಲ್ದಾರರಿಗೆ ವಿಶೇಷ ಸೂಚನೆ ನೀಡಲಾಗಿದೆ.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿಸಿದಂತೆ ಐಎಮ್‌ಡಿ ಮತ್ತು ಕೆಎಸ್‌ಎನ್‌ಡಿಎಂಸಿಯಿಂದ ನೀಡಿದ ಮುನ್ಸೂಚನೆ ಎಚ್ಚರಿಕೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು. ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ ಐಇಸಿ ಚಟುವಟಿಕೆಗಳನ್ನು ಜಾರಿಗೆ ತರಬೇಕು.

Heat wave Special notice from Collector to Tehsildar over Temperature rise

ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಬಸ್ ಟರ್ಮಿನಲ್‌ಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸಬೇಕು.

ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡಬೇಕು. ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆ ನೀಡುವ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ಪ್ರಚಾರ ಮಾಡಬೇಕು.

Heat wave Special notice from Collector to Tehsildar over Temperature rise

ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಂಡು ನೀರಿನ ಲಭ್ಯತೆಗೆ ಏರ್ಪಾಡು ಮಾಡಬೇಕು. ಸಾಮೂಹಿಕ ಸಭೆಗಳು ನಡೆಯುವ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು.

ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು. ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು. ಸಾಕಷ್ಟು ಓಆರ್‌ಎಸ್ ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್ ಏರ್ ಕೂಲರ್‌ಗಳು ಇರಬೇಕು.

ಸಾಧ್ಯವಾದಷ್ಟು ಮಟ್ಟಿಗೆ ಸಭೆ ಸಮಾರಂಭಗಳನ್ನು ಬೆಳಗ್ಗೆ ಅಥವಾ ಸಂಜೆಯ ತಂಪಾದ ವಾತಾವರಣವಿರುವ ಅವಧಿಯಲ್ಲಿ ನಿಗದಿಪಡಿಸಬೇಕು ಎಂಬುದರ ಬಗ್ಗೆ ಕೂಡಲೇ ಅಗತ್ಯ ಕ್ರಮ ವಹಿಸಬೇಕು ಎಂದು ಎಲ್ಲಾ ತಹಸೀಲ್ದಾರಗಳಿಗೆ ಜಿಲ್ಲಾಧಿಕಾರಿಗಳು ವಿಶೇಷ ಸೂಚನೆ ನೀಡಿದ್ದಾರೆ.

ಇದರ ಜೊತೆಗೆ ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು. ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸಬೇಕು ಮತ್ತು ಹೋಟೆಲ್‌ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್ ಮತ್ತು ಅಂಗಡಿಗಳ ತಪಾಸಣೆ ನಡೆಸಿ ಆಹಾರ ಮತ್ತು ನೀರಿನ ಗುಣಮಟ್ಟದ ಸುರಕ್ಷತೆಯ ಬಗ್ಗೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+