ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಉಷ್ಣಾಂಶ 3-4 ಡಿಗ್ರಿ ಏರುವ ಸಾಧ್ಯತೆ
ಬೆಂಗಳೂರು, ಏ.27: ಚಳಿಯಿಂದ ಹೇಗಾದರೂ ಬಚಾವಾಗಬಹುದು ಆದರೆ ಸೆಕೆಯಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭವಲ್ಲ.
ಮುಂದಿನ ಮೂರು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಗರಿಷ್ಠ ಉಷ್ಣಾಂಶ 3-4 ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕಲಬುರಗಿಯಲ್ಲಿ 43.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ, ವಿಜಯಪುರ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ಬಳ್ಳಾರಿ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಾಗಲಿದೆ.

ತಮಿಳುನಾಡಿನಲ್ಲಿ ಫ್ಯಾನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಭಾಗಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ ಹಾಗೊಂದಮ್ಮೆ ಮಳೆ ಬಂದರೆ ಮಾತ್ರ ತಾಪಮಾನ ಕೊಂಚ ಕಡಿಮೆಯಾಗಬಹುದು.
ಈಗಾಗಲೇ ಉತ್ತರ ಕರ್ನಾಟಕ ಭಾಗಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿಯಲ್ಲಿ 43, ರಾಯಚೂರಿನಲ್ಲಿ 42, ವಿಜಯಪುರ, ಬಾಗಲಕೋಟೆ, ಕೊಪ್ಪಳದಲ್ಲಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications