Karnataka Cold wave: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆಯುವ ಮುನ್ಸೂಚನೆ
Karnataka Cold Wave: ಇದೀಗ ರಾಜ್ಯಾದ ಬಹುತೇಕ ಇಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಹೆಚ್ಚು ಶೀತದ ವಾತಾವರಣ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 11) ಬೆಳಗ್ಗೆ ಮೈ ಕೊರೆಯುವ ಚಳಿ ಇದೆ. ನಗರದಲ್ಲಿ ಕಳೆದ ಒಂದು ವಾರದಿಂದಲೂ ಬೆಳಗ್ಗೆ & ಸಂಜೆ ವೇಳೆ ಭೀಕರ ಚಳಿ ಮುಂದುವರೆದಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯಾದ್ಯಂತ ಬೆಳಗ್ಗೆ 10 ಗಂಟೆಯಾದರೂ ಚಳಿಯ ಪ್ರಮಾಣ ಮುಂದುವರೆಯುತ್ತಿದ್ದು, ಈ ಸಮಯದಲ್ಲಿ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಜನವರಿ 15ವರೆಗೆ ಬಹುರೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಮುಂದುವರಿಯಲಿದೆ. ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಪ್ರಮಾಣ ಕುಸಿಯುತ್ತಲಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕಲಬುರಗಿ, ಬೀದರ್, ಚಿಕ್ಕಮಗಳೂರು, ಮಂಡ್ಯ, ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಕುಸಿತವಾಗಿದೆ. ಪರಿಣಾಮ ಮಧ್ಯಾಹ್ನ ಆದರೂ ಚಳಿ ವಾತಾವರಣ ಮುಂದುವರೆಯಲಿದೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಳಿ ಇರಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಚಳಿ ಮುಂದುವರೆಯಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ್‌ನಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 2-4 ಡಿಗ್ರಿ ಕುಸಿಯಲಿದೆ. ಕರಾವಳಿ ಜಿಲ್ಲೆಯ ಭಾಗವಾದ ಉತ್ತರ ಕನ್ನಡದಲ್ಲಿ ತಾಪಮಾನ ಏರಿಕೆ ಆಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಚಳಿ ಎಂದಿನಂತೆ ಇರಲಿದ್ದು, ತಾಪಮಾನ ಸ್ಥಿರವಾಗಿರಲಿದೆ ಎಂದು ತಿಳಿಸಿದೆ.
ಡಿಸೆಂಬರ್ 15ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ಗದಗ, ಮಂಡ್ಯ, ಮೈಸೂರು, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 1-2 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆಯಿದೆ. ನಂತರದ ದಿನಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ಜನವರಿ 9ರಿಂದಲೇ ಚಳಿಯ ಪ್ರಮಾಣ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಇಬ್ಬನಿಯಿಂದ ಮುಚ್ಚಿದ ವಾತಾವರಣ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಸುರಿದ ರಣಭೀಕರ ಮಳೆಗೆ ಹಲವೆಡೆ ಜನಜೀವನ ಅಸ್ತವಾಗಿತ್ತು. ಇದೀಗ ಭೀಕರ ಚಳಿ ಮುಂದುವರೆದ ಹಿನ್ನೆಲೆ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಇನ್ನೂ ಚಳಿಯಿಂದ ರಕ್ಷಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಜನರು ಹೊರಗಡೆ ಹೋಗುವಾಗ ತಲೆ, ಕವಿ, ಮೈಮುಚ್ಚಿಕೊಳ್ಳುವಂತಹ ಉಡುಪುಗಳನ್ನು ಜೊತೆಗೆ ಇಟ್ಟುಕೊಂಡು ಹೋಗುವುದು ಉತ್ತಮ. ಅದರಲ್ಲೂ ವಯಸ್ಸಾದವರು ಹಾಗೂ ಮಕ್ಕಳಿಗೆ ಕಾಟನ್‌ನಿಂದ ತಯಾರಿಸಿದ ಶ್ವೆಟ್ಟರ್, ಟೋಪಿ ಹಾಕುವುದನ್ನು ಮರೆಯದಿರಿ.












Click it and Unblock the Notifications