Karnataka Rain: ರಾಜ್ಯದ ಹಲವೆಡೆ ಭಾರೀ ಮಳೆ; ಜಮೀನಿಗೆ ತೆರಳಿದ್ದಾಗ ಓರ್ವ ಮಹಿಳೆ ಸಿಡಿಲು ಬಡಿದು ಸಾವು

ಬೆಂಗಳೂರು, ಏಪ್ರಿಲ್‌ 20: ಬಿಸಿಲ ಬೇಗೆಯಿಂದ ಬಸವಳಿದಿದ್ದ ಕರುನಾಡಲ್ಲಿ ಕಳೆದು ದಿನಗಳಿಂದ ಮಳೆರಾಯ ತಂಪೆರೆದಿದ್ದಾನೆ. ಬೀದರ್‌ ಜಿಲ್ಲೆಯಲ್ಲೂ ಶುಕ್ರವಾರ ಭರ್ಜರಿ ಮಳೆಯಾಗಿದ್ದು, ಜಮೀನಿಗೆ ತೆರಳಿದ್ದಾಗ ಓರ್ವ ಮಹಿಳೆ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲೂಕಿನ ಬರೂರು ಗ್ರಾಮದಲ್ಲಿ ನಡೆದಿದೆ.

ಹೌದು, ಬೀದರ್‌ ತಾಲೂಕಿನ ಬರೂರು ಗ್ರಾಮದಲ್ಲಿ ಕೆಲಸಕ್ಕೆಂದು ಜಮೀನಿಗೆ ಹೋಗಿದ್ದ ಪುಷ್ಪಲತಾ (50) ಸಾವನ್ನಪ್ಪಿದ್ದಾರೆ. ಇದೇ ವೇಳೆ ಗುಡುಗು, ಮಿಂಚು ಸಮೇತ ಭಾರೀ ಮಳೆಯಾದ್ದು, ಪರಿಣಾಮ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೀದರ್‌ ಜಿಲ್ಲೆಯ ಔರಾದ್, ಕಮಲನಗರ, ಭಾಲ್ಕಿ ತಾಲೂಕಿನಲ್ಲಿ‌ ಧಾರಾಕಾರ ಮಳೆ ಸುರಿದರೆ, ಬಸವಕಲ್ಯಾಣ, ಹುಮನಾಬಾದ್‌, ಚಿಟಗುಪ್ಪಾ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ಬಿಸಿಲ ಧಗೆಗೆ ತತ್ತರಿಸಿದ್ದ ಬೀದರ್ ಜನರಿಗೆ ಮಳೆ ತಂಪೆರೆದಿದೆ. ಶುಕ್ರವಾರ ರಾತ್ರಿಯಿಂದ ಜಿಲ್ಲೆಯಾದ್ಯಂತ ಗಡುಗು‌ ಸಹಿತ ಧಾರಾಕಾರ ಮಳೆ ಸುರಿದಿದೆ.

Heavy Rain A Woman Died In Bidar Due To Heavy Rain And Lightning

ಯುಗಾದಿ ಬಳಿಕ ಕರ್ನಾಟಕದ ವಿವಿಧ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಇಂದು ವರುಣ ಆಗಮನವಾಗಿದ್ದು, ಸಿಟಿಯಲ್ಲಿ ತುಂತುರು ಮಳೆ ಆರಂಭವಾಗಿದೆ. ನಗರದ ಟೌನ್ ಹಾಲ್, ಮಾರ್ಕೆಟ್, ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರ್ ಬ್ಯಾಂಕ್ ಸರ್ಕಲ್ , ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಮಂದಿ ಫುಲ್​ ಖುಷ್​ ಆಗಿದ್ದಾರೆ.

ಇನ್ನೂ ಹಾಸನದಲ್ಲೂ ಶುಕ್ರವಾರ ಮೊದಲ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಸಕಲೇಶಪುರ ತಾಲ್ಲೂಕಿನ, ಬಿರಡಹಳ್ಳಿ ಗ್ರಾಮದಲ್ಲಿ ಭಾರೀ ಮಳೆಗೆ ಮೂರು ಮನೆಗಳಿಗೆ ಹಾನಿಯಾಗಿದ್ದು, ಮನೆಯ ಮೇಲೆ ಮರ ಬಿದ್ದು ಒಂದು ಮನೆ ಜಖಂ ಆಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಮಳೆಯಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥವರು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+