ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆ, ರಸ್ತೆಗಳು ಜಲಾವೃತ
ಬೆಂಗಳೂರು, ಅಕ್ಟೋಬರ್ 09 : ಉದ್ಯಾನ ನಗರಿ ಬೆಂಗಳೂರು ಗುಡುಗು, ಮಿಂಚು ಮತ್ತು ಭಾರಿ ಮಳೆಗೆ ಸಾಕ್ಷಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬುಧವಾರ ಸಂಜೆ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗಿದೆ. ಒಂದು ತಾಸಿಗೂ ಹೆಚ್ಚು ಕಾಲ ವಿವಿಧ ಬಡಾವಣೆಗಳಲ್ಲಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದೆ. ವಾಹನ ಸವಾರರು ಸಂಚಾರ ದಟ್ಟಣೆಯಿಂದಾಗಿ ಪರದಾಡುತ್ತಿದ್ದಾರೆ.

ಜಯನಗರ, ಬಸವನಗುಡಿ, ಮೆಜೆಸ್ಟಿಕ್, ಬಿಟಿಎಂ ಲೇಔಟ್, ಗಿರಿನಗರ, ಶ್ರೀನಿವಾಸ ನಗರ, ಹೊಸಕೆರೆಹಳ್ಳಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಧ್ಯಾಹ್ನ 4 ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಿಂಚು, ಗುಡುಗು, ಸಿಡಿಲು ಸೇರಿದಂತೆ ಸುಮಾರು ಒಂದು ತಾಸು ಮಳೆಯಾಗಿದೆ.
ಬೆಂಗಳೂರು ಹವಾಮಾನ : ತಾಪಮಾನ 29ºC , ಗಾಳಿ 0 , ತೇವಾಂಶ 0.53 , ಒತ್ತಡ 1008.15 pa, Possible Light Rain #bengaluru #weather
— ಹವಾಮಾನ ವರದಿ ಬೆಂಗಳೂರು (@blr_weather) October 9, 2019
ಬುಧವಾರ ರಾತ್ರಿಯೂ ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದ ಮಳೆಯಿಂದಾಗಿ ರಸ್ತೆ, ಚರಂಡಿಗಳು ಜಲಾವೃತ್ತವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.












Click it and Unblock the Notifications