Heavy Rain: ಕರ್ನಾಟಕ ಸೇರಿ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ, ವಿವಿಧ ಭಾಗಗಳಲ್ಲಿ ಶಾಖದ ಅಲೆ ಎಚ್ಚರಿಕೆ

Heavy Rain: ಚಂಡಮಾರುತ ಪ್ರಸರಣ ಹಾಗೂ ನೈರುತ್ಯ ಮಾನ್ಸೂನ್ ಪ್ರಭಾವದ ಕಾರಣದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ, ಉತ್ತರ ಭಾರತದ ವಿವಿಧ ಭಾಗದಲ್ಲಿ ಬಿಸಿಲ ತಾಪಮಾನವು ಹೆಚ್ಚಳವಾಗಿದೆ. ಭಾರತದಲ್ಲಿ ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗಳು ಕಂಡುಬಂದಿದೆ. ದೆಹಲಿಯಲ್ಲಿ ತೀವ್ರ ಶಾಖದ ಅಲೆ, ಕೇರಳದಲ್ಲಿ ಭಾರೀ ಮಳೆಯ ಎಚ್ಚರಿಕೆ ಮತ್ತು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

ಭಾರತದಲ್ಲಿ ಭಾರೀ ಹವಾಮಾನ ವೈಪರೀತ್ಯವಾಗಿದ್ದು, ಭಾರತೀಯರು ಸಂಕಷ್ಟ ಎದುರಿಸುವಂತೆ ಆಗಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಜೂನ್ ಮೊದಲ ವಾರದಲ್ಲಿ ನೈಋತ್ಯ ಮಾನ್ಸೂನ್ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ. ಆದರೆ ಈ ಬಾರಿ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ.

Heavy Rain

ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಗರಿಷ್ಠ ತಾಪಮಾನ ಪ್ರಮಾಣವು ಹೆಚ್ಚಳವಾಗಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನವು 43 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತೀವ್ರ ಶಾಖದ ಅಲೆಯನ್ನು ಎದುರಿಸುತ್ತಿದೆ. ದಕ್ಷಿಣ ರಾಜ್ಯಗಳಲ್ಲಿ ನೈಋತ್ಯ ಮಾನ್ಸೂನ್ ಪ್ರವೇಶವಾಗುತ್ತಿದ್ದು, ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದೆಹಲಿಯು ಸೋಮವಾರವೂ ತೀವ್ರ ಶಾಖದ ಅಲೆ ಎದುರಾಗಿತ್ತು. ದೆಹಲಿಯ ಸಫ್ದರ್ಜಂಗ್‌ನಲ್ಲಿ ಗರಿಷ್ಠ ತಾಪಮಾನ 43.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಇದುವರೆಗಿನ ಋತುವಿನ ಅತ್ಯಧಿಕ ಗರಿಷ್ಠ ತಾಪಮಾನವಾಗಿದೆ. ನಗರದ ಹಲವಾರು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 44 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಮುಂಬರುವ ದಿನಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ತಾಪಮಾನವು 43 ಡಿಗ್ರಿ ಸೆಲ್ಸಿಯಸ್‌ನಿಂದ 45 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಭಾರೀ ಹೆಚ್ಚಳವಾಗುತ್ತಿದೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟವೂ ಕುಸಿಯುತ್ತಿದೆ, ಕೆಲವು ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) "ಮಧ್ಯಮ" ದಿಂದ "ಕಳಪೆ"ಗೆ ಬದಲಾಗುತ್ತಿದೆ.

ಬೆಂಗಳೂರಿನಲ್ಲಿ ಗುಡುಗು ಮತ್ತು ಮಳೆ ಎಚ್ಚರಿಕೆ

ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಿಂಚು - ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ನಿಂದ 35 ಡಿಗ್ರಿ ಸೆಲ್ಸಿಯಸ್ ನಡುವೆ ಇರುವ ಸಾಧ್ಯತೆ ಇದೆ.

ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸೇರಿದಂತೆ ಕರ್ನಾಟಕದ ಒಳನಾಡಿನಲ್ಲಿ ಪೂರ್ವ ಮಾನ್ಸೂನ್ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ.

ಕೇರಳದಲ್ಲಿ ಭಾರೀ ಮಳೆಯ ಎಚ್ಚರಿಕೆ

ಇನ್ನು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕೇರಳದಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಬಲವಾದ ಗಾಳಿ ಇರಲಿದೆ. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕೊಟ್ಟಿದೆ.

Karnataka Rain: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಭಾರೀ ಮಳೆ, ನೈಋತ್ಯ ಮಾನ್ಸೂನ್ ಪ್ರವೇಶ ಅಪ್ಡೇಟ್ಸ್‌
Karnataka Rain: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಭಾರೀ ಮಳೆ, ನೈಋತ್ಯ ಮಾನ್ಸೂನ್ ಪ್ರವೇಶ ಅಪ್ಡೇಟ್ಸ್‌

ಅರೇಬಿಯನ್ ಸಮುದ್ರ ಮತ್ತು ಬಂಗಾಳಕೊಲ್ಲಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿನ ಕರಾವಳಿ ಜಿಲ್ಲೆಗಳು ಭಾರೀ ಮಳೆಯಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+