Heavy Rain Alert: ಚಂಡಮಾರುತ ಪ್ರಭಾವ: ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ!

Heavy Rain Alert: ಬಿಸಿಲಿನಿಂದ ಕಂಗಾಲಾಗಿದ್ದ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ವ್ಯಾಪ್ತಿಯ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಬೆಂಗಳೂರು ಹಾಗೂ ಕರ್ನಾಟಕದ ಮೇಲೂ ಆಗುತ್ತಿದ್ದು, ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಕಂಪ್ಲೀಟ್‌ ಡೀಟೆಲ್ಸ್‌ ಇಲ್ಲಿದೆ.

ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತ ಸೃಷ್ಟಿಯಾಗಿದ್ದು, ದೇಶದ 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇನ್ನು ನೆರೆಯ ತಮಿಳುನಾಡಿನಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲೂ ಇನ್ನು ಎರಡರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಇನ್ನು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ ನೆರೆಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೆ ತಮಿಳುನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.

Heavy Rain Alert Cyclone Impact Heavy Rain in Karnataka including Bengaluru till March 15th

ತಮಿಳುನಾಡಿನಲ್ಲಿ ಸೈಕ್ಲೋನ್ ಸೃಷ್ಟಿಯಾದಾಗೆಲ್ಲ ಕರ್ನಾಟಕದ ಹವಾಮಾನದ ಮೇಲೆ ಪರಿಣಾಮ ಬೀರಿರುವ ಉದಾಹರಣೆಗಳು ಇವೆ. ಈ ಬಾರಿಯೂ ಅದೇ ಮುಂದುವರಿದಿದೆ. ಬೆಂಗಳೂರಿನ ಹಲವು ಭಾಗದಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಸೃಷ್ಟಿಯಾಗಿದೆ. ಇನ್ನು ಸೈಕ್ಲೋನ್‌ ಪ್ರಭಾವ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಆಗಿದೆ. ಫೆಬ್ರವರಿ ಎರಡನೇ ವಾರದಿಂದಲೇ ರಾಜ್ಯದಲ್ಲಿ ಬಿಸಿಲು ಹೆಚ್ಚಾಗಿತ್ತು. ಇದೀಗ ಚಂಡಮಾರುತದಿಂದ ಮಳೆಯಾಗುತ್ತಿರುವುದು ಹಾಗೂ ಪೂರ್ವ ಮುಂಗಾರಿನ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿರುವುದು ಜನರಲ್ಲಿ ಸಂತಸ ಮೂಡಿಸಿದೆ.

ರಾಜ್ಯದ ಈ ಭಾಗದಲ್ಲಿ ಮಳೆ: ಸೈಕ್ಲೋನ್‌ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಲಿದೆ ಎಂದು ಹೇಳಲಾಗಿದೆ.

Heavy Rain Alert Cyclone Impact Heavy Rain in Karnataka including Bengaluru till March 15th

ಎಲ್ಲೆಲ್ಲಿ ಮಳೆ

ಮಾರ್ಚ್‌ 12 (ಬುಧವಾರ): ಇಂದು ಬೆಂಗಳೂರು, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆ ಸೇರಿದಂತೆ ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ರಾಜ್ಯದ ಉಳಿದ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಐಎಂಡಿ ರಿಪೋರ್ಟ್‌ ಹೇಳಿದೆ.

ತಾಪಮಾನ ಇಳಿಕೆ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದ್ದರೂ ರಾಜ್ಯದಾದ್ಯಂತ ತಾಪಮಾನ ಇಳಿಕೆಯಾಗಿದೆ. ರಾಜ್ಯದ ವಿವಿಧ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನು ಕೊಡಲಾಗಿತ್ತು. ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಉಷ್ಣಾಂಶ ಹೆಚ್ಚಳವಾಗಿತ್ತು. ಇದೀಗ ಮಳೆಯಿಂದ ಉಷ್ಣಾಂಶ ಇಳಿಕೆಯಾಗಿದೆ. ಬೆಂಗಳೂರಿನಲ್ಲೂ ತಣ್ಣನೆಯ ವಾತಾವರಣ ಇದೆ.

ದೇಶದ 18 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ!

ದೇಶದ ಹವಾಮಾನದ ಮೇಲೆ ಏಕಕಾಲಕ್ಕೆ ಎರಡು ಚಂಡಮಾರುತ ಪ್ರಭಾವ ಬೀರಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದ ಭಾಗದಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ಮಾರ್ಚ್‌12ರಿಂದ ಮಾರ್ಚ್ 15 ರವರೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಬಿಹಾರ ರಾಜ್ಯಗಳ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮುಂದುವರಿದು ಈಶಾನ್ಯ ಭಾರತದ ಪಶ್ಚಿಮ ಬಂಗಾಳ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದೇಶದಾದ್ಯಂತ ಹವಾಮಾನ ವೈಪರೀತ್ಯ ವರದಿಯಾಗುತ್ತಿದೆ. ಒಂದು ಕಡೆ ತೀವ್ರ ಮಳೆಯಾಗುತ್ತಿದ್ದರೆ ಮತ್ತೊಂದು ಕಡೆ ತೀವ್ರ ಬಿಸಿಲು ಶುರುವಾಗಿದೆ.

ದೇಶದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತಗಳು ಕಾಣಿಸಿಕೊಂಡಿದ್ದು. ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಸೈಕ್ಲೋನ್ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ಕೊಡಲಾಗಿದೆ. ಬಾಂಗ್ಲಾದೇಶದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಐದು ದಿನಗಳಲ್ಲಿ ಭಾರತದ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಗುಜರಾತ್‌ನಲ್ಲಿ ಶಾಖದ ಅಲೆಯ ಎಚ್ಚರಿಕೆ

ಈಶಾನ್ಯ ರಾಜ್ಯಗಳು, ದಕ್ಷಿಣ ಹಾಗೂ ಪೂರ್ವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೆ. ಉತ್ತರ ಕರ್ನಾಟಕ ಹಾಗೂ ಗುಜರಾತ್‌ ಸೇರಿದಂತೆ ವಿವಿಧ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಕೊಡಲಾಗಿದೆ. ಗುಜರಾತ್‌ನಲ್ಲಿ ತೀವ್ರ ಶಾಖದ ಅಲೆ ಕಾಣಿಸಿಕೊಳ್ಳಲಿದೆ. ಈ ಭಾಗದಲ್ಲಿ ಶಾಖದ ಅಲೆಯ ಪ್ರಮಾಣವು 37 ರಿಂದ 41 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ಅಂದಾಜಿಸಲಾಗಿದೆ. ಮಾರ್ಚ್‌ 15ರ ವರೆಗೆ ಮೂರು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್ ಹೇಳಿದೆ.

ಎರಡು ಚಂಡಮಾರುತಗಳ ಪರಿಚಲನೆಯಿಂದ ಪ್ರಭಾವಿತವಾಗಿ ಮಾರ್ಚ್ 15 ರವರೆಗೆ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಾರ್ಚ್ 15 ರವರೆಗೆ ಹವಾಮಾನ ವೈಪರೀತ್ಯ ಕಾಣಿಸಿಕೊಳ್ಳಲಿದೆ.

ಈ ಅವಧಿಯಲ್ಲಿ ಮಳೆ, ಭಾರೀ ಹಿಮಪಾತ ಹಾಗೂ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಪಂಜಾಬ್ ಮತ್ತು ಹರಿಯಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 13ಕ್ಕೆ ಮಿಂಚು ಗುಡುಗು ಸಹಿತ ಮಳೆಯಾಗಲಿದೆ. ಮಾರ್ಚ್ 13 ರಿಂದ 15 ರವರೆಗೆ ರಾಜಸ್ಥಾನದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ರಿಪೋರ್ಟ್‌ ಮಾಹಿತಿ ನೀಡಿದೆ.

ಬಾಂಗ್ಲಾದೇಶದಲ್ಲಿನ ಚಂಡಮಾರುತದ ಪ್ರಭಾವದಿಂದಾಗಿ ಬಿಹಾರ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 15 ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಹಾಗೂ ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+