School Holiday: ಭಾರೀ ಮಳೆಗೆ ರಾಜ್ಯದ ಈ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಣೆ

School Holiday: ಕರಾವಳಿಯ ಪ್ರಮುಖ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಒಂದು ವಾರದಿಂದ ಭಾರೀ ಮಳೆ ಆಗುತ್ತಿದೆ. ಈ ಮಹಾಮಳೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕಾರಣಕ್ಕಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಜುಲೈ 2ರಂದು ಎಲ್ಲ ಶಾಲಾ-ಕಾಲೇಜುಗಳಿಗೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.

ಹೌದು, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಜುಲೈ 2 ಮತ್ತು 3ರಂದು ಗರಿಷ್ಠ 200 ಮಿಲಿ ಮೀಟರ್ ಗೂ ಅಧಿಕ ಬಿರುಗಾಳಿ, ಗುಡುಗು, ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಸಂಬಂಧ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗುರುವಾರ (ಜುಲೈ 2) ಒಂದು ದಿನ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಿಗೆ, ಅನುದಾನಿತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ ಅವರು ಇಂದು ಆದೇಶ ಹೊರಡಿಸಿದ್ದಾರೆ.

Heavy Rain Alert

ಅಂಗನವಾಡಿಯಿಂದ ಹಿಡಿದು ಪ್ರಾಥಮಿಕ, ಪ್ರೌಢಶಾಲೆ ಮತ್ತು ದ್ವಿತೀಯ ಪಿಯುಸಿವರೆಗೂ ಈ ಮಳೆ ರಜೆ ಘೋಷಣೆ ಅನ್ವಯಿಸಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದೆ.

ಮುಂದಿನ 48 ಗಂಟೆ ಅತ್ಯಧಿಕ ಮಳೆ

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಅತ್ಯಧಿಕ ಧಾರಾಕಾರ ಮಳೆ ಆಗಲಿದೆ. ಈ ಹಿನ್ನೆಲೆ ನದಿ ಪ್ರದೇಶಗಳ ಜನರಿಗೆ, ಗುಡ್ಡಗಾಡು, ತಗ್ಗು ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಇನ್ನೂ ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ತೆರಳುವ ಮಕ್ಕಳಿಗೆ ಮಳೆ, ಸಂಭವನೀಯ ಅಪಾಯ ಗಮನಿಸುವ ಬುದ್ಧಿಶಕ್ತಿ ಇರುವುದಿಲ್ಲ. ನೀರು, ಹಳ್ಳ ಕೊಳ್ಳಗಳನ್ನು ಕಂಡರೆ, ರಸ್ತೆಯಲ್ಲಿ ನೀರು ನಿಂತರೆ ಆಟವಾಡಲು, ನೀರು ಹರಿವು ನೋಡಲು ಮುಂದಾಗಬಹುದು. ಮಕ್ಕಳ ಹಿತದೃಷ್ಟಿಯಿಂದ ಹಾಗೂ ಭಾರೀ ಮಳೆ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಲಾಗಿದೆ.

ಉಡುಪಿ ಮತ್ತು ಉತ್ತರ ಕನ್ನಡದ ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಜಿಲ್ಲೆಗಳ ಶಾಲಾ, ಕಾಲೇಜು ಬಂದ್ ಕುರಿತು ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+