Rain Alert: ಭಾರಿ ಮಳೆ ಎಚ್ಚರಿಕೆ, ಈ ಜಿಲ್ಲೆಗಳಲ್ಲಿ ಜುಲೈ 5 ಶನಿವಾರದ ತನಕ ಭರ್ಜರಿ ಮಳೆ...

ಮಳೆ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಇದೀಗ ಜನರು ಕೂಡ ಚಿಂತೆ ಮಾಡುವಂತೆ ಆಗಿದೆ. ಒಂದು ಕಡೆ, ಮಳೆ ಆಗುತ್ತಿರಲಿಲ್ಲ ಅಂತಾ ಯೋಚನೆ ಮಾಡುವ ಸಮಯ ಹೋಗಿ, ಯಾಕೆ ಮಳೆ ಆಗುತ್ತಿದೆ? ಅನ್ನೋ ರೀತಿ ಚಿಂತೆ ಮಾಡುವಂತೆ ಆಗಿದೆ. ಹೀಗೆ ಭಾರಿ ಮಳೆ ಹಿನ್ನೆಲೆ ಕರ್ನಾಟಕದ ಡ್ಯಾಂಗಳು ಕೂಡ ತುಂಬಿ ತುಂಬಿ ತುಳುಕುತ್ತಿವೆ. ಇಂತಹ ಸಮಯದಲ್ಲೇ ಈಗ ಮತ್ತಷ್ಟು & ಭಾರಿ ಪ್ರಮಾಣದ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ.

ಮಳೆ.. ಮಳೆ.. ಮಳೆ... ಎಲ್ಲೆಲ್ಲೂ ಮಳೆಯ ಆರ್ಭಟ ಬಲು ಜೋರಾಗಿದ್ದು, ರೈತರು ಖುಷಿಯಾಗಿದ್ದಾರೆ. ಕರ್ನಾಟಕದ ಮೂಲೆ ಮೂಲೆಯಲ್ಲೂ ಭಾರಿ ಮಟ್ಟದಲ್ಲಿ ಮಳೆ ಸುರಿದು ರೈತರು ಕೂಡ ಸಿಕ್ಕಾಪಟ್ಟೆ ಖುಷಿ ಖುಷಿಯಾಗಿದ್ದಾರೆ. ಇಂತಹ ಸಮಯದಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 2 ಬುಧವಾರ ನಂತರ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೀಗ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶವಾದ, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿ ಚಿಕ್ಕಮಗಳೂರು ಭಾಗದಲ್ಲೂ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

Heavy Rain Alert For These Districts Of Karnataka From July 3 Of 2025

ಎಲ್ಲಾ ಕಡೆ ಮಳೆಯ ಅಬ್ಬರ!

ಇದರ ಜೊತೆ ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಜುಲೈ 2 ಬುಧವಾರ ನಂತರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಾವಣಗೆರೆ, ಚಿತ್ರದುರ್ಗ, ಹುಬ್ಬಳ್ಳಿ & ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿವ ಎಚ್ಚರಿಕೆ ನೀಡಲಾಗಿದೆ, ಕುಂದಾ ನಗರಿ ಬೆಳಗಾವಿ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದೆಯಂತೆ. ಹೀಗಾಗಿ ಇದೀಗ ಹಲವು ಕಡೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವನ್ನ ಕೂಡ ಕೈಗೊಳ್ಳಲಾಗಿದೆ. ಮತ್ತೊಂದ್ಕಡೆ ಮಳೆ ಹಿನ್ನೆಲೆಯಲ್ಲಿ ಹಲವು ಭಾಗದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಡ್ಯಾಂಗಳು ಕೂಡ ತುಂಬಿ ತುಳುಕುತ್ತಿವೆ

ಕರ್ನಾಟಕದಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಜೂನ್ ತಿಂಗಳಲ್ಲೇ ಈ ಬಾರಿ ಡ್ಯಾಂಗಳು ತುಂಬಿ ತುಳುಕಲು ಶುರು ಮಾಡಿವೆ. ಹೀಗಾಗಿ, ರೈತರು ಹಾಗೂ ಕನ್ನಡಿಗರು ಕೂಡ ಈ ವಿಚಾರದಲ್ಲಿ ಖುಷಿಯಾಗಿದ್ದಾರೆ. ಅದರಲ್ಲೂ ಬೆಂಗಳೂರಿಗೆ ಕುಡಿಯುವ ನೀರು ನೀಡುವ ಕೃಷ್ಣರಾಜ ಸಾಗರ ಅಂದ್ರೆ ನಮ್ಮ ಕೆಆರ್‌ಎಸ್ ಫುಲ್ ತುಂಬಿ ತುಳುಕುತ್ತಿದ್ದು, ಗರಿಷ್ಠ 124 ಅಡಿ ಇರುವ ಈ ಜಲಾಶಯಕ್ಕೆ 50,000ಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜೊತೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ 1,07,081 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ಡ್ಯಾಂಗೆ 65,182 ಕ್ಯುಸೆಕ್ ಅಡಿ ನೀರು ಹರಿದು ಬರುತ್ತಿದೆ. ಹೀಗಾಗಿ ಭಾಗಶಃ ಕರ್ನಾಟಕದ ಎಲ್ಲಾ ಡ್ಯಾಂಗಳು ತುಂಬಿ ತುಳುಕುತ್ತಿವೆ. ಇದೆಲ್ಲವನ್ನ ನೋಡುತ್ತಿದ್ದರೆ ಮತ್ತೊಂದು ವರ್ಷ ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಅನ್ನಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+