ಚಂಡಮಾರುತ ಎಫೆಕ್ಟ್‌: ಮುಂದಿನ 3 ಗಂಟೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಮೇ 15: ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಕೊನೆಗೂ ವರುಣ ದೇವ ತಂಪೆರೆದಿದ್ದಾನೆ. ಬಿರು ಬಿಸಿಲು ಕಂಗೆಟ್ಟ ಜನರಿಗೆ ಮಳೆಯಾಗಿ ಸಂತಸ ಮೂಡಿಸಿದ್ದು, ಕೃಷಿ ಚಟುವಟಿಕೆ ಆರಂಭಿಸಿರುವ ರೈತರ ಖುಷಿಯಲ್ಲಿದ್ದಾರೆ. ಇತ್ತ ಕಳೆದು ಮೂರ್ನಾಲ್ಕು ದಿನದಿಂದ ಸುರಿದ ಭಾರೀ ಮಳೆಗೆ ಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನೂರಾರು ಮರಗಳು ಮಳೆ ಗಾಳಿಗೆ ಧರೆಗಪ್ಪಳಿಸಿವೆ. ಕೆಲ ಸಾವು ನೋವುಗಳು ವರದಿಯಾಗಿದೆ.

ಇನ್ನೂ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗಾ, ಯಾದಗಿರಿ ಸೇರಿ ಈ ಭಾಗದ ಜಿಲ್ಲೆಗಳಿಗೆ ಭರ್ಜರಿ ಮಳೆಯಾಗಲಿದ್ದು, ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ರೂಪುಗೊಂಡಿದ್ದು ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

heavy rain alert forecast in Many More district next 3 hours

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಚದುರಿದಿಂದ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 50-60 ಕಿಮೀ ತಲುಪುವ ಸಾದ್ಯತೆಯಿದ್ದು, 21 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬುಧವಾರ ಸಂಜೆ ಬೆಂಗಳೂರು ಹಾಗೂ ರಾಮನಗರದ ಹಲವೆಡೆ ಮಳೆಯಾಗಿದೆ. ಇನ್ನೂ ಇಂದು ಸಹ ಮಳೆಯಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನೂ ಕಳೆದ ಎರಡ್ಮೂರು ದಿನಗಳಿಂದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಆಲಮಟ್ಟಿ, ದೊಡ್ಡಬಳ್ಳಾಪುರ, ಹೊನ್ನಾಳಿ, ಆಗುಂಬೆ, ಭದ್ರಾವತಿ, ಚಿಂತಾಮಣಿ, ಕುಶಾಲನಗರ, ಚಿಕ್ಕೋಡಿ, ಹುಕ್ಕೇರಿ, ಧಾರವಾಡ, ಮುರಗೋಡು, ಲೋಕಾಪುರ, ಕುಂದಗೋಳ, ಹಿಡಕಲ್, ಧರ್ಮಸ್ಥಳ, ಉಡುಪಿ, ಬೆಳ್ತಂಗಡಿ, ಕೋಟಾ, ಕುಮಟಾ, ಸುಳ್ಯ, ಯಲ್ಲಾಪುರ, ಹುಬ್ಬಳ್ಳಿ, ಹಿರೇಕೆರೂರು, ಬಿಳಗಿ, ಬೈಲಹೊಂಗಲ, ನಿಪ್ಪಾಣಿ, ಸಂಕೇಶ್ವರ, ನರಗುಂದ, ಮುದ್ದೇಬಿಹಾಳ, ರಬಕವಿ, ರಾಯ್​ಬಾಗ್​, ಮುದಗಲ್, ಅಜ್ಜಂಪುರ, ಹುಣಸೂರು, ಶಿವಮೊಗ್ಗ, ಗುಬ್ಬಿ, ನಾರಾಯಣಪುರ, ಕಕ್ಕೇರಿ, ಸಿಂದಗಿ, ಕೂಡಲಸಂಗಮ, ವಿಜಯಪುರ, ಕಳಸದಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+