Rain Alert: ಕೆಲವೇ ನಿಮಿಷಗಳಲ್ಲಿ ಮಳೆ ಆರ್ಭಟದ ಎಚ್ಚರಿಕೆ, ಕರ್ನಾಟಕ ಈ ಜಿಲ್ಲೆಗಳಲ್ಲಿ ಅಲರ್ಟ್!
ಮುಂಗಾರು ಮಳೆ ಅಬ್ಬರ ಸ್ವಲ್ಪ ಕೂಡ ಕಡಿಮೆ ಆಗುತ್ತಲೇ ಇಲ್ಲ. ಕರ್ನಾಟಕ ರಾಜ್ಯದಲ್ಲಿ ಸಾಕು ಸಾಕು ಎನಿಸುವಷ್ಟು ಮಳೆ ಈಗಾಗಲೇ ಬಂದಿದೆ. ಹೀಗಿದ್ದರೂ ಮುಂಗಾರು ಮಳೆಯ ಅಬ್ಬರಕ್ಕೆ ಬ್ರೇಕ್ ಬಿದ್ದಿಲ್ಲ. ಅದರಲ್ಲೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಕಾಲ ಮಳೆರಾಯ ಅಬ್ಬರಿಸಿ ಬೊಬ್ಬಿರಿಯಲಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ.
ಮುಂಗಾರು ಮಳೆ ಅಬ್ಬರದಿಂದ ಈಗಾಗಲೇ ಕರ್ನಾಟಕದ ನದಿಗಳು ತುಂಬಿ ತುಳುಕುತ್ತಿದ್ದು, ಜನರು ಕೂಡ ಇದನ್ನ ನೋಡಿ ಬೆಚ್ಚಿಬಿದ್ದಿದ್ದಾರೆ. ಹಲವು ಪ್ರದೇಶಗಳಲ್ಲಿ ಪ್ರವಾಹ & ನೆರೆ ಪರಿಸ್ಥಿತಿ ನಿರ್ಮಾಣ ಆಗಿದೆ. ಇಷ್ಟೆಲ್ಲಾ ಒತ್ತಡದ ನಡುವೆ ಕೂಡ ಮತ್ತಷ್ಟು ಮಳೆ ಬೀಳುತ್ತಿದ್ದು, ಮುಂದಿನ 24 ಗಂಟೆ ಅವಧಿಯಲ್ಲಿ ಮತ್ತಷ್ಟು ಮಳೆ ಆರ್ಭಟ ಹೆಚ್ಚಾಗುವ ಮುನ್ಸೂಚನೆಯ ನೀಡಲಾಗಿದೆ. ಹಾಗಾದ್ರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ? ಮುಂದೆ ಓದಿ.

ಮಳೆ ಆರ್ಭಟಕ್ಕೆ ಈ ಜಿಲ್ಲೆಗಳು ತತ್ತರ
ಅಷ್ಕಕ್ಕೂ ಕರ್ನಾಟಕದ ಕರಾವಳಿ & ಮಲೆನಾಡು ಭಾಗದಲ್ಲಿ ಭಾರಿಯಿಂದ ಅತೀ ಭಾರಿ ಮಳೆ ಇಂದು ಸುರಿಯಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಕಂಟ್ರೋಲ್‌ಗೆ ಸಿಗದಷ್ಟು ಸುರಿಯಲಿದೆ ಎಂದು ಇದೀಗ ಹವಾಮಾನ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿರುವ ಮುನ್ಸೂಚನೆ ಪ್ರಕಾರ, ಈ 5 ಜಿಲ್ಲೆ ಪರಿಸ್ಥಿತಿ ಸೂಕ್ಷ್ಮವಾಗಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಪ್ರವಾಹ ಸ್ಥಿತಿ
ಹಾಗೇ ಬೆಳಗಾವಿ & ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ ಹವಾಮಾನ ಇಲಾಖೆ ಅಧಿಕಾರಿಗಳು. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಅಧಿಕಾರಿಗಳು ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ನಿನ್ನೆ ಅಂದ್ರೆ ಬುಧವಾರ ಕೂಡ ಕರಾವಳಿ ಜಿಲ್ಲೆಗಳು ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಡ್ಯಾಂಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣಕ್ಕೆ ಇದೀಗ ನದಿ ಅಕ್ಕಪಕ್ಕ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚಿಸಲಾಗಿದೆ.












Click it and Unblock the Notifications