Rain Alert: ನಿನ್ನೆ ಮೊನ್ನೆ ಬರಲಿಲ್ಲ ಇವತ್ತಾದ್ರೂ ಕರ್ನಾಟಕದಲ್ಲಿ ಬರುತ್ತಾ ಮಳೆ?
ಬೆಂಗಳೂರು ಫೆಬ್ರವರಿ 28: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಬಿಸಿಲಿನ ಝಳ ದಿನ ಕಳೆದಂತೆ ಹೆಚ್ಚಾತ್ತಿದೆ. ಬೆಳಿಗ್ಗೆ ಹತ್ತು ಗಂಟೆಯಾಗುತ್ತಿದ್ದಂತೆ ಬಿಸಿಲು ನೆತ್ತಿ ಸುಡಲು ಆರಂಭಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆ ನೀಡಲಾಗುತ್ತಿದ್ದರೂ ವರುಣ ಕರುಣೆ ತೋರುತ್ತಿಲ್ಲ. ಹೀಗಾಗಿ ಜನ ಬೇಸಿಗೆ ಬಿಸಿಲು ತೀವ್ರಗೊಳ್ಳುವ ಮೊದಲು ಆರಂಭಿಕ ಮಳೆಗಾಗಿ ಕಾಯುತ್ತಿದ್ದಾರೆ.
ಈ ನಡುವೆ ಹವಾಮಾನ ಇಲಾಖೆ ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿರುವ ಕರ್ನಾಟಕದ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಬೆಂಗಳೂರಿನಲ್ಲಿ ಮಳೆಯಾಗುವ ಸೂಚನೆಯನ್ನು ನೀಡಿದೆ. ಇದಲ್ಲದೆ ಬೆಂಗಳೂರು ಗ್ರಾಮಾಂತರ, ಕೊಡಗು, ದಾವರಣಗೆರೆ, ತುಮಕೂರು, ಚಿತ್ರದುರ್ಗದಲ್ಲಿ ಮುಂದಿನ ಎರಡು ದಿನಗಳಲ್ಲಿ ಲಘು ಮಳೆಯಾಗಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಬಳ್ಳಾರಿ, ಗದಗ, ಕೊಪ್ಪಳ, ಯಾದಗಿರಿ, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ಕುಲಬುರಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಹಾಸನ, ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಉತ್ತರ ಭಾರತದ ಹವಾಮಾನ ಮತ್ತೊಮ್ಮೆ ತಿರುವು ಪಡೆದುಕೊಂಡಿದ್ದು, ಮಲೆನಾಡಿನಲ್ಲಿ ಹಿಮಪಾತದ ಪರಿಣಾಮ ಬಯಲು ಸೀಮೆಯಲ್ಲಿ ಗೋಚರಿಸುತ್ತಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಹವಾಮಾನವು ಇದ್ದಕ್ಕಿದ್ದಂತೆ ತಂಪಾಗಿದ್ದು, ಬಲವಾದ ಗಾಳಿ ಬೀಸುತ್ತಿದೆ, ಆದರೆ ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಮಳೆಯಾಗಿದೆ.
ಉತ್ತರಪ್ರದೇಶ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಅಂದರೆ ಬುಧವಾರದಂದು ಗುಡುಗು ಸಹಿತ ಸಾಧಾರಣ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮುಂದಿನ 2-3 ಗಂಟೆಗಳಲ್ಲಿ ಮಧ್ಯಪ್ರದೇಶ, ಜಾರ್ಖಂಡ್, ಬಿಹಾರ, ಛತ್ತೀಸ್‌ಗಢ, ಉತ್ತರಾಖಂಡದ ಕೆಲವು ಭಾಗಗಳು ಮತ್ತು ಉತ್ತರ ಮಹಾರಾಷ್ಟ್ರದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗು ಮಳೆಯಾಗುವದಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನೂ ಜಬಲ್‌ಪುರ, ವಿದಿಶಾ, ಭೋಪಾಲ್ ಹಾಗೂ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಮಿಂಚು ಸಮೇತ ಮಳೆಯಾಗಲಿದ್ದು 50-70 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಮಧ್ಯಪ್ರದೇಶವನ್ನು ಹೊರತುಪಡಿಸಿ, ದಕ್ಷೀಣ ಛತ್ತೀಸ್‌ಗಢ, ವಿದರ್ಭ, ಒಡಿಶಾ, ಬಂಗಳಾ, ಜಾರ್ಖಂಡ್ ನಲ್ಲಿ ಗುಡುಗು, ಮುಂಚು ಸಮೇತ 30-40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಜೊತೆಗೆ ಕೇರಳದ ದಕ್ಷಿಣ ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಹಿಮಾಲಯದಲ್ಲಿ ಲಘು ಮಳೆಯಾಗಲಿದೆ.












Click it and Unblock the Notifications