Heavy Rain: ಬೆಂಗಳೂರು ಸೇರಿ ಈ ಭಾಗದಲ್ಲಿ ಧಾರಾಕಾರ ಮಳೆ: ಆರೆಂಜ್ ಅಲರ್ಟ್! ಐಎಂಡಿ ಮುನ್ಸೂಚನೆ ಇಲ್ಲಿದೆ

Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಇನ್ನೂ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ಪ್ರಸಾರಣ ಹಾಗೂ ಸೈಕ್ಲೋನ್ ಪ್ರಭಾವದಿಂದಾಗಿ ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಆರ್ಭಟ ಮುಂದುವರಿದಿದೆ. ಇನ್ನೊಂದು ವಾರ ಇದೇ ವಾತಾವರಣ ಇರಲಿದೆ. ಆಗಸ್ಟ್‌ 17ರಿಂದ ಮಳೆ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Heavy Rain Alert IMD Forecasts Downpour in Bengaluru amp amp Parts of Karnataka

ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ ಆಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಧಾರವಾಡ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲೂ ಮಳೆ ಇರಲಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ ಮಳೆ ಇದೆ. ಇನ್ನು ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲೂ ಮಳೆ ಮುಂದುವರಿದಿದೆ.

ದಕ್ಷಿಣ ಒಡಿಶಾ-ಉತ್ತರ ಆಂಧ್ರಪ್ರದೇಶದ ಕರಾವಳಿಗಳು ಮತ್ತು ಪಕ್ಕದ ಪ್ರದೇಶಗಳಾದ ವಾಯುವ್ಯ-ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶವು ಸೃಷ್ಟಿಯಾಗಿದೆ. ವಾಯು ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 7.6 ಕಿ.ಮೀ ವರೆಗೆ ವಿಸ್ತರಿಸಿದೆ. ಅರೇಬಿಯನ್ ಸಮುದ್ರದಾದ್ಯಂತ ದಕ್ಷಿಣ ಒಡಿಶಾ ಮತ್ತು ಪಕ್ಕದ ಉತ್ತರ ಆಂಧ್ರಪ್ರದೇಶ, ಉತ್ತರ ತೆಲಂಗಾಣ, ದಕ್ಷಿಣ ಮಹಾರಾಷ್ಟ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶಕ್ಕೆ ಸಂಬಂಧಿಸಿದ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಮತ್ತು 4.5 ಕಿ.ಮೀ ನಡುವೆ ಎತ್ತರಕ್ಕೆ ದಕ್ಷಿಣಕ್ಕೆ ವಾಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಮುಂಗಾರು ಆರ್ಭಟ ಈ ಭಾರೀ ಜೋರಾಗಿದೆ. ಅಲ್ಲದೇ ಆಗಸ್ಟ್‌ 17ರಿಂದ ರಾಜ್ಯದಾದ್ಯಂತ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+