5 ದಿನ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಭಾರಿ ಮಳೆ

ಬೆಂಗಳೂರು, ಅಕ್ಟೋಬರ್ 04 : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆಯೂ ಮಳೆಯಾಗುತ್ತಿದೆ.

ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಾಲ್ಕು ದಿನಗಳಿಂದ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದೆ.

Heavy Rain Alert In 5 Districts Of Karnataka

ಕೇರಳ ರಾಜ್ಯದಿಂದ 2.9 ಕಿ. ಮೀ. ವೇಗದಲ್ಲಿ ಮೋಡಗಳ ಚಲನೆ ಇದೆ. ಪೂರ್ವದಿಂದ ಪಶ್ಚಿಮಾಭಿಮುಖವಾಗಿ ಮೇಲ್ಮೈ ಸುಳಿಗಾಳಿ ಬೀಸುತ್ತಿದೆ. ಇದರ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.

ಬಳ್ಳಾರಿ, ಬೀದರ್, ತುಮಕೂರು, ಕೋಲಾರ, ಬೆಂಗಳೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

rain

ಶುಕ್ರವಾರ ಸಂಜೆ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗಿದೆ. ಜಯನಗರ, ಬಸವನಗುಡಿ, ಮೆಜೆಸ್ಟಿಕ್, ಶಿವಾಜಿನಗರ ಸೇರಿದಂತೆ ನಗರ ಮತ್ತು ನಗರದ ಹೊರ ಪ್ರದೇಶಗಳಲ್ಲಿ ಮಳೆಯಾಗಿದೆ.

ಕಳೆದ ನಾಲ್ಕು ದಿನದಿಂದ ಬೆಂಗಳೂರು ನಗರದಲ್ಲಿ ಪ್ರತಿದಿನ ಮಳೆಯಾಗುತ್ತಿದೆ. ರಾತ್ರಿ, ಮುಂಜಾನೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ 5 ದಿನ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+