ಮುಂದಿನ 2 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ
ಬೆಂಗಳೂರು, ಮೇ 16: ಮುಂದಿನ 2 ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೊಡಗಿನ ನಾಪೊಕ್ಲುವಿನಲ್ಲಿ ಶುಕ್ರವಾರ 7 ಸೆಂ.ಮೀನಷ್ಟು ಮಳೆಯಾಗಿದೆ. ಸುಬ್ರಹ್ಮಣ್ಯ, ಶಿಗ್ಗಾಂ, ಗೇರುಸೊಪ್ಪ, ಹೊನ್ನಾವರ, ಯಲ್ಲಾಪುರ, ಸುಳ್ಯ, ಇಳಕಲ್, ಹಾರಂಗಿ, ನರಗುಂದ, ಸೊರಬ, ಹಳಿಯಾಳ, ಮುಂಡಗೋಡ್, ನಿಪ್ಪಾಣಿ, ತೀರ್ಥಹಳ್ಳಿ, ಸೋಮವಾರಪೇಟೆ, ಭಾಗಮಂಡಲ, ಹುಕ್ಕೇರಿ, ಬೆಳಗಾವಿ, ಬಾದಾಮಿ, ಜಮಖಂಡಿ, ಹಿರೇಕೆರೂರು, ಬೀದರ್, ಸಾಗರದಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ.ಬೆಂಗಳೂರಿನಲ್ಲಿ ಗರಿಷ್ಠ 34.9 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಸಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ತುಮಕೂರಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ.
ಕಲಬುರಗಿಯಲ್ಲಿ ಗರಿಷ್ಠ ಅಂದರೆ40.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications