ಕರಾವಳಿ, ಮಲೆನಾಡಿನಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಆಗಸ್ಟ್ 17 : ಭಾರಿ ಮಳೆಯಿಂದಾಗಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಈಗಾಗಲೇ ಅಪಾರ ಹಾನಿ ಉಂಟಾಗಿದೆ. ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ಸಂಜೆ ಹವಾಮಾನ ಇಲಾಖೆ ಈ ಕುರಿತು ಮನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

Heavy rain

ಅರಬ್ಬಿ ಸಮುದ್ರದಲ್ಲಿ ಪ್ರತಿಕೂಲ ಪರಿಸ್ಥಿತಿ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆ.18ರಂದು ಮಲೆನಾಡ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಆ.19ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ. ಆ.20 ಮತ್ತು 21ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಂಡ ಕಳುಹಿಸಲು ಸೂಚನೆ : ಕೊಡಗು ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ತುರ್ತು ಕಾರ್ಯಕ್ಕೆ ನೆರವಾಗಲು ತಂಡ ಕಳುಹಿಸಿ ಕೊಡಲು ಕಂದಾಯ ಇಲಾಖೆ ಸೂಚನೆ ನೀಡಿದೆ.

ಮೈಸೂರು, ಮಂಡ್ಯ, ರಾಮನಗರ, ದಾವಣಗೆರೆ, ಬೆಂಗಳೂರು ನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಧಿಕಾರಿ ಮತ್ತು ನೌಕರರನ್ನು ಒಳಗೊಂಡ ತಂಡ ಕಳಿಸುವಂತೆ ನಿರ್ದೇಶನ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+