ಮಳೆ.. ಮಳೆ.. ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ? School Holiday

ಮಳೆರಾಯ ತನ್ನ ಆರ್ಭಟ ತೋರಿಸುತ್ತಾ, ಭಾರಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಇದೀಗ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಕಳೆದ 3 ದಿನಗಳಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ಕನ್ನಡ ನಾಡಿನ ಜನರು ಕೂಡ ಮನೆಯಿಂದ ಹೊರಗೆ ಬರಲು ಯೋಚನೆ ಮಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂತಹ ಸಮಯದಲ್ಲೇ ಮತ್ತೆ 4 ದಿನಗಳ ಕಾಲ ರಣಮಳೆ ಸುರಿಯುವ ಎಚ್ಚರಿಕೆ ನೀಡಲಾಗಿದೆ. ಹಾಗಾದ್ರೆ, ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ?

ಮಳೆ.. ಮಳೆ.. ಮಳೆ.. ಹೀಗೆ ಕರ್ನಾಟಕದ ಮೂಲೆ ಮೂಲೆಗೂ ಮಳೆಯ ಮೋಡಗಳು ದಾಳಿ ಇಡುತ್ತಿವೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು, ಮಂಡ್ಯ, ಮೈಸೂರು ಭಾಗದಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆ ನೀಡಲಾಗಿದೆ. ಹಾಗೇ ಚಾಮರಾಜನಗರ ಜನರಿಗೂ ಮಳೆ ಕಾಟ ತಪ್ಪುವುದಿಲ್ಲ. ಮತ್ತೊಂದು ಕಡೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಭಾರಿ ಮಳೆ ಗ್ಯಾರಂಟಿ ಆಗಿದೆ.

Heavy Rain Alert In Karnataka And School Holiday May Announce On July 23

ಜುಲೈ 23 ಬುಧವಾರ ರಜೆ ಘೋಷಣೆ?

ಹಾಗೇ ಕೋಲಾರ, ಚಿಕ್ಕಬಳ್ಳಾಪುರ ಸೇರಿ ಸುತ್ತಮುತ್ತಲ ಭಾಗದಲ್ಲಿ ಭಾರಿ ಮಳೆ ಬೀಳಲಿದೆ. ಇನ್ನು ಬೆಳಗಾವಿ, ಹುಬ್ಬಳ್ಳಿ & ಧಾರವಾಡ ಸೇರಿದಂತೆ ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್‌ ಬಳ್ಳಾರಿ ಜಿಲ್ಲೆಯಲ್ಲಿ ಕೂಡ ಮಳೆರಾಯ ತನ್ನ ಆರ್ಭಟ ತೋರಿಸಲಿದ್ದಾನೆ. ಹೀಗೆ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆರಾಯ ತನ್ನ ಆರ್ಭಟ ತೋರಿಸಲಿರುವ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಯಾವಾಗ ಬೇಕಾದರೂ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಈಗ ದಟ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+