ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಆಗಸ್ಟ್ 02: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಆಗಾಗ ಮಳೆಯಾಗಬಹುದು.
ಶನಿವಾರ ಕರಾವಳಿ ಭಾಗದ ಜಿಲ್ಲೆಗಳು ಮತ್ತು ಬೆಳಗಾವಿ ಮತ್ತು ಧಾರವಾಡದಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಶನಿವಾರ ಸಂಜೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ನಗರದಲ್ಲಿ ಮೋಡ ಕವಿದವಾತಾವರಣವಿದೆ. ಭಾನುವಾರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.

ಶನಿವಾರ ದಕ್ಷಿಣ ಕನ್ನಡದಲ್ಲಿ 5 ಸೆಂ. ಮೀ. ಮಳೆಯಾಗಿದೆ. ಸಮುದ್ರದಲ್ಲಿ ಗಾಳಿಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿಯೂ ಶನಿವಾರ ಸಾಧಾರಣ ಮಳೆಯಾಗಿದೆ.
ಧಾರವಾಡದಲ್ಲಿ ಹೆಚ್ಚು ಮಳೆಯಾಗಿದ್ದು, ಟೋಲ್ ಗೇಟ್ ಬಳಿ ರಸ್ತೆ ಜಲಾವೃತವಾಗಿತ್ತು. ಕೆಲವು ಕಾಲ ವಾಹನಗಳ ಸಂಚಾರಕ್ಕೂ ಅಡ್ಡಿಯಾಯಿತು. ಕಲಘಟಗಿ, ಅಳ್ನಾವರ ಭಾಗಗಳಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ. ಬೆಳಗಾವಿಯಲ್ಲಿಯೂ ಮಳೆಯಾಗಿದೆ.












Click it and Unblock the Notifications