ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ತನಕ ಮಳೆ
ಬೆಂಗಳೂರು, ಆಗಸ್ಟ್ 19 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
Recommended Video
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗಿದೆ. ಹೊಸನಗರದ ಬ್ರಹ್ಮೇಶ್ವರ ವೀರಭದ್ರೇಶ್ವರ ದೇವಾಲಯದ ಪಕ್ಕದಲ್ಲಿರುವ ಪಾರ್ವತಮ್ಮ ದೇವಿ ದೇವಾಲಯದ ಮೇಲೆ ಮರ ಬಿದ್ದಿದೆ.

ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಗರಿಷ್ಠ 12 ಸೆಂ. ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
5 ದಿನ ಯೆಲ್ಲೊ ಅಲರ್ಟ್ : ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳವಾರ ಆಗುಂಬೆ 10, ಸುಬ್ರಮಣ್ಯ 8, ಮೂಡಬಿದಿದೆ 7, ಸುಳ್ಯ ಮತ್ತು ಕೊಪ್ಪ 5, ಮಂಗಳೂರು 3, ಅಂಕೋಲಾ 2, ಶಿವಮೊಗ್ಗ 2, ದಾವಣಗೆರೆ ಮತ್ತು ಚಿಂತಾಮಣಿಯಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.












Click it and Unblock the Notifications