Karnataka Rain: ನಿಲ್ಲದ ವರುಣಾರ್ಭಟ, ಇನ್ನೆಷ್ಟು ದಿನ ಎಲ್ಲೆಲ್ಲಿ ಭಾರೀ ಮಳೆ?
ಕರ್ನಾಟಕದ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಬಿರುಸುಗೊಂಡಿದ್ದು, ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯವಾಗಿತ್ತು. ಈ ಹಿನ್ನೆಲೆ ಕರಾವಳಿ ಭಾಗದ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ಒಳನಾಡಿನಲ್ಲಿ ಭಾರೀ ಮಳೆ ದಾಖಲಾಗಿದೆ. ಸೆಪ್ಟೆಂಬರ್ 24ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಮಾನ್ಸೂನ್ ಮಾರುತಗಳ ಚಲನೆಯ ಬಗ್ಗೆ ವಿವರಿಸಿರುವ ಹವಾಮಾನ ಇಲಾಖೆಯು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇದೆ ಎಂದು ಹೇಳಿದೆ.
ನೈರುತ್ಯ ಮಾನ್ಸೂನ್ ಹಿಂತೆಗೆದುಕೊಳ್ಳುವ ರೇಖೆಯು ಫತೇಹಾಬಾದ್, ಪಿಲಾನಿ, ಅಜ್ಮೀರ್, ದೀಸಾ, ಭುಜ್ ಮೂಲಕ ಹಾದುಹೋಗುತ್ತಿದೆ. ಮಹಾರಾಷ್ಟ್ರದಿಂದ ಪಶ್ಚಿಮ ಮಧ್ಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯವರೆಗೆ ಮರಾಠವಾಡ, ತೆಲಂಗಾಣ ಮತ್ತು ರಾಯಲಸೀಮಾದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ. ಎತ್ತರದಲ್ಲಿ ಮೇಲಿನ ವಾಯು ಚಂಡಮಾರುತದ ಪರಿಚಲನೆಯನ್ನು ಹೊಂದಿದೆ.

ಮಧ್ಯಪ್ರದೇಶದ ಮಧ್ಯ ಭಾಗಗಳಿಂದ ಪಶ್ಚಿಮ ಮಧ್ಯ ಮತ್ತು ಪಕ್ಕದ ನೈರುತ್ಯ ಬಂಗಾಳ ಕೊಲ್ಲಿಯವರೆಗೆ ಪೂರ್ವ ವಿದರ್ಭ, ತೆಲಂಗಾಣ ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ಇದು ಮುಂದುವರಿಯುತ್ತದೆ ಎಂದು ವಿವರಿಸಿದೆ.
ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ?
ದಕ್ಷಿಣ ಒಳನಾಡಿನ ಬಳ್ಳಾರಿಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ವಾರವಿಡೀ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ
ಜಿಲ್ಲೆಗಳು. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 18ರಿಂದ ಸೆಪ್ಟೆಂಬರ್ 27ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುನ್ಸೂಚನೆ ಇದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸೆಪ್ಟೆಂಬರ್ 22ರವರೆಗೆ ಚದುರದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 23ರಿಂದ 25ರವರೆಗೆ ಮಳೆ ಚಟುವಟಿಕೆ ತುಸು ಕಡಿಮೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 26ರಿಂದ ಮಳೆ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜಧಾನಿ ಬೆಂಗಳೂರು ಭಾಗದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.












Click it and Unblock the Notifications