Karnataka Rain: ಬೇಸಿಗೆಯಲ್ಲೂ ವರುಣನ ಆರ್ಭಟ: ಇನ್ನೆರಡು ದಿನ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಬೇಸಿಗೆ ಬಂತು ಎಂದು ಬಿಸಿಯಾಗಿದ್ದ ಕರ್ನಾಟಕಕ್ಕೆ ಮಳೆ ತಂಪೆರೆದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಶನಿವಾರ ಸಂಜೆಯಿಂದ ತಡರಾತ್ರಿವರೆಗೆ ಮಳೆ ಆರ್ಭಟಿಸಿದೆ. ಅಕ್ಷರಶಃ ಮಳೆಗಾಲದ ಪರಿಸ್ಥಿತಿ ಕಂಡುಬಂದಿದೆ. ಬೇಸಿಗೆಯ ಸೆಕೆಯಿಂದ ಪರಿತಪ್ಪಿಸುತ್ತಿದ್ದ ಜನ ಈ ದಿಢೀರ್‌ ಮಳೆಯಿಂದಾಗಿ ಕಂಗಾಲಾಗಿದ್ದಾರೆ. ಇನ್ನು ಇಂದು ಕೂಡ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸೂಚನೆ ನೀಡಿದೆ. ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂಬ ಮಾಹಿತಿ ಇಲ್ಲಿದೆ..

ಬೇಸಿಗೆ ಶುರುವಾದ ಕಾರಣ ರಾಜ್ಯದಲ್ಲಿ ತಾಪಮಾನ ಕೂಡ ದಿಢೀರ್‌ ಏರಿಕೆ ಕಂಡಿತ್ತು. ಒಂದು ವಾರದ ಹಿಂದೆಯೂ ಬೆಂಗಳೂರಿನ ಹಲವೆಡೆ ತುಸು ಮಳೆಯಾಗಿತ್ತು. ಸುಡುತ್ತಿದ್ದ ಕರುನಾಡನ್ನು ಮಳೆ ಕೂಲ್‌ ಮಾಡಿದ್ದರೂ, ದಿಢೀರ್‌ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬೆಂಗಳೂರು ನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Heavy Rain Alert In Karnataka Over 20 Districts To Receive Heavy Rainfall

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಗುಲ್ಬರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಯಾದಗಿರಿಯ ಹಲವೆಡೆ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ಮೂರು ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲೂ ಯಾವುದೇ ಬದಲಾವಣೆ ಇಲ್ಲ.

ಉತ್ತರ-ದಕ್ಷಿಣದ ನಡುವೆ ಟ್ರಫ್‌ ಇದ್ದು, ಕರ್ನಾಟಕದ ಉತ್ತರ ಒಳನಾಡಿನಿಂದ ದಕ್ಷಿಣದ ತಮಿಳುನಾಡಿನವರೆಗೆ ಸಮುದ್ರಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಟ್ರಫ್‌ ಸಾಗುತ್ತಿದೆ. ದಕ್ಷಿಣ ಛತ್ತೀಸ್‌ಗಢದಿಂದ ದಕ್ಷಿಣ ಒಳನಾಡಿನವರೆಗೆ ಹಾಗೂ ತೆಲಂಗಾಣ ಹಾಗೂ ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ಸಮುದ್ರ ಮಟ್ಟದಿಂದ ಎತ್ತರದಲ್ಲೂ ಟ್ರಫ್‌ ಇದ್ದು, ಗಾಳಿಯ ನಿಲುಗಡೆ ಕಡಿಮೆಯಾಗಿದೆ. ಈ ಕಾರಣದಿಂದಲೇ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ ಎಂದು ಹೇಳಿದೆ.

ಇಂದು ಎಲ್ಲೆಲ್ಲಿ ಮಳೆ?

ದಕ್ಷಿಣ ಕನ್ನಡ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾನುವಾರ ಜೋರು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಭಾಗದಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣವೇ ಇರಲಿದ್ದು, ಹಗುರದಿಂದ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್‌ನಿಂದ 22 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ. ಮುಂದಿನ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+