ಮಳೆ.. ಮಳೆ.. 48 ಗಂಟೆಗಳಲ್ಲಿ ಭರ್ಜರಿ ಮಳೆ!
ಮಳೆ ಬೀಳದೆ ಭೂಮಿ ಬರಿದಾಗಿ ಕರ್ನಾಟಕದ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅಂದ್ರೆ ಏಪ್ರಿಲ್ 2ನೇ ವಾರ ಕರ್ನಾಟಕದಲ್ಲಿ ಜೋರಾಗಿ ಮಳೆ ಬಂದಿದ್ದರು ಕೂಡ ಆ ನಂತರ ಮಳೆ ನಿಂತೇ ಹೋಗಿದೆ. ಕಳೆದ ಒಂದು ವಾರದಿಂದ ನಿರಂತರ ಬಿಸಿಲು & ಬಿಸಿಗಾಳಿ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಪರಿಸ್ಥಿತಿ ಹೀಗಿದ್ದಾಗ ಹವಾಮಾನ ಇಲಾಖೆ ಮಳೆ ಬಗ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 48 ಗಂಟೆ ಒಳಗಾಗಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳಲಿದೆಯಂತೆ.
ಕರ್ನಾಟಕದಲ್ಲಿ 2 ವಾರದ ಹಿಂದೆ ಭರ್ಜರಿ ಮಳೆ ಸುರಿದಿತ್ತು, ಆದರೂ ಕಳೆದ ವಾರ ಮತ್ತೆ ಮಳೆ ಮಾಯವಾಗಿದೆ. ಭಾರಿ ಬಿಸಿಲಿನ ಬೇಗೆಗೆ ಜನರೂ ನರಳಾಡಿದ್ದು, ಈ ಸಮಯದಲ್ಲಿ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಮುಂದಿನ 48 ಗಂಟೆ ಒಳಗಾಗಿ, ಭರ್ಜರಿ ಮಳೆ ಬೀಳುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಹಾಗಾದರೆ ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ, ಮುಂದಿನ 48 ಗಂಟೆ ಒಳಗಾಗಿ ಭರ್ಜರಿ ಮಳೆ ಬೀಳಲಿದೆ ಗೊತ್ತಾ? ಬೆಂಗಳೂರಿನಲ್ಲೂ ಮಳೆಯ ಆರ್ಭಟ ಶುರುವಾಗಲಿದೆಯಾ? ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.

ಮಳೆ ಬೀಳಲಿರುವ ಜಿಲ್ಲೆಗಳು ಇವು
ಹವಾಮಾನ ಇಲಾಖೆ ಈಗ ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರು ನಗರ, ವಿಜಯಪುರ & ಹಾಸನ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳಲಿದೆಯಂತೆ. ಹಾಗೇ ಚಿತ್ರದುರ್ಗ, ರಾಯಚೂರು & ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ ಮತ್ತು ಯಾದಗಿರಿ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಮಾಹಿತಿ ನೀಡಲಾಗಿದೆ. ಏಪ್ರಿಲ್ 30ರಿಂದ ಮಳೆಯ ಅಬ್ಬರ ಶುರು ಆಗಲಿದ್ದು, ಮೇ 3ರ ತನಕ ಈ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನಿಡಲಾಗಿದೆ.
ಯೆಲ್ಲೋ ಅಲರ್ಟ್ ಘೋಷಣೆ!
ಈ ಮೂಲಕ ಬೆಂಗಳೂರಿಗರು, ಮಳೆಯ ಸಿಂಚನ ಪಡೆಯುವುದು ಪಕ್ಕಾ ಆಗುತ್ತಿದೆ. ಹಾಗೇ ಭಾರಿ ಮಳೆ ಹಿನ್ನೆಲೆ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 2 ರಂದು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಬೆಂಗಳೂರು ನಗರ & ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಜನ ನಿಟ್ಟುಸಿರು ಬಿಟ್ಟಿದ್ದರು. ಆದರೆ ಕಳೆದ ವಾರದಿಂದ ಮಳೆ ನಿಂತು ಹೋಗಿದ್ದು, ಇದೀಗ ಭರ್ಜರಿ ಸುದ್ದಿಯೊಂದು ಸಿಕ್ಕಿದೆ. ಇನ್ನು 1 ದಿನದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ.
ಮುಂಗಾರು ಮಳೆ ಕೈಕೊಟ್ಟ ಕಾರಣಕ್ಕೆ, 2023 ರಲ್ಲಿ ಬರದ ಬೇಗೆಯಲ್ಲಿ ಕರ್ನಾಟಕ ಬೆಂದು ಹೋಗಿ ಜನರೂ ಪರದಾಡಿದ್ದಾರೆ. ಇದೇ ಕಾರಣಕ್ಕೆ, ಈ ಬಾರಿಯ ಬೇಸಿಗೆಯಲ್ಲಿ ಪರದಾಟ ಶುರುವಾಗಿ ಹನಿ ಹನಿ ನೀರು ಬಂಗಾರವಾಗಿದೆ. 2024 ಬೇಸಿಗೆ ಆರಂಭಕ್ಕೆ ಮೊದಲೇ ಹೊಸ ತಲೆನೋವು ಶುರುವಾಗಿತ್ತು. ಕುಡಿಯುವ ನೀರನ್ನು ಒದಗಿಸಲು ಸರ್ಕಾರ ಪರದಾಡುತ್ತಿದೆ. ಆದರೆ ಇದೇ ಸಮಯದಲ್ಲಿ ವರುಣ ದೇವ ಕನ್ನಡಿಗರಿಗೆ ಗುಡ್ ನ್ಯೂಸ್ ಕೊಡಲು ಈಗ ಸಜ್ಜಾಗಿದ್ದಾನೆ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆ!
ನಮ್ಮ ರಾಜ್ಯದ ಹಲವು ಪ್ರದೇಶಗಳಲ್ಲಿ ಟ್ಯಾಂಕರ್ ಮಾಫಿಯಾ ಶುರುವಾಗಿದೆ. ಹೀಗಿದ್ದಾಗ ಜನ ಕೂಡ ಅನಿವಾರ್ಯ ಪರಿಸ್ಥಿತಿಗೆ ಸಿಲುಕಿ, ಸಾವಿರ ಸಾವಿರ ಖರ್ಚು ಮಾಡುತ್ತಿದ್ದಾರೆ. ಶ್ರೀಮಂತರ ಬಳಿ ಹಣ ಇದೆ, ಆದರೆ ಬಡವರು ಏನು ಮಾಡಬೇಕು? ಒಂದು ಟ್ಯಾಂಕರ್ ನೀರಿಗೆ ಸಾವಿರಾರು ರೂಪಾಯಿ ಹಣ ಕೊಡಬೇಕಾ? ಅಂತಾ ಜನ ಪ್ರಶ್ನೆ ಮಾಡುತ್ತಿದ್ದಾರೆ. ಇದೇ ಸಮಯದಲ್ಲಿ ಮಳೆರಾಯ ಏಪ್ರಿಲ್ 2ನೇ ವಾರ ಕನ್ನಡಗರ ಮೇಲೆ ಕರುಣೆ ತೋರಿಸಿ, ಮಳೆ ಬರಿಸಿದ್ದ. ಆದ್ರೆ ಇದೀಗ ಮಳೆಯ ಅಬ್ಬರ ಕಡಿಮೆ ಆಗಿದ್ದು ಮೇ ಮೊದಲ ವಾರದಲ್ಲಿ ಮಳೆ ಮತ್ತೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಎನ್ನಲಾಗಿದೆ.
ಮುಂಗಾರು ಮಳೆ ಕೈಕೊಟ್ಟ ಕಾರಣಕ್ಕೆ, 2023 ರಲ್ಲಿ ಬರದ ಬೇಗೆಯಲ್ಲಿ ಕರ್ನಾಟಕ ಬೆಂದು ಹೋಗಿ ಜನರೂ ಪರದಾಡಿದ್ದಾರೆ. ಇದೇ ಕಾರಣಕ್ಕೆ, ಈ ಬಾರಿಯ ಬೇಸಿಗೆಯಲ್ಲಿ ಪರದಾಟ ಶುರುವಾಗಿ ಹನಿ ಹನಿ ನೀರು ಬಂಗಾರವಾಗಿದೆ. 2024 ಬೇಸಿಗೆ ಆರಂಭಕ್ಕೆ ಮೊದಲೇ ಹೊಸ ತಲೆನೋವು ಶುರುವಾಗಿತ್ತು. ಕುಡಿಯುವ ನೀರನ್ನು ಒದಗಿಸಲು ಸರ್ಕಾರ ಪರದಾಡುತ್ತಿದೆ. ಆದರೆ ಇದೇ ಸಮಯದಲ್ಲಿ ವರುಣ ದೇವ ಕನ್ನಡಿಗರಿಗೆ ಗುಡ್ ನ್ಯೂಸ್ ಕೊಡಲು ಈಗ ಸಜ್ಜಾಗಿದ್ದಾನೆ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿದೆ.
ಪ್ರಕೃತಿ ಮೇಲೆ ಮನುಷ್ಯರ ದೌರ್ಜನ್ಯ
ಮನುಷ್ಯ ಮಾಡಿದ ತಪ್ಪಿಗೆ ಹಾಗೂ ಪ್ರಕೃತಿ ಮೇಲೆ ಎಸಗುತ್ತಿರುವ ದೌರ್ಜನ್ಯಕ್ಕೆ ಈಗ ಭಾರಿ ದೊಡ್ಡ ಎಡವಟ್ಟುಗಳೇ ನಡೆಯುತ್ತಿವೆ. ಅದನ್ನ ಸರಿ ಮಾಡಲು ಕೂಡ ಆಗುತ್ತಿಲ್ಲ. ಅದರ ಪರಿಣಾಮ ಎನ್ನುವಂತೆ ಮಳೆ ಬೀಳಬೇಕಾದ ಜಾಗದಲ್ಲಿ ಮಳೆ ಬರುತ್ತಿಲ್ಲ, ಇದರ ಬದಲಾಗಿ ಮರುಭೂಮಿ ಸೇರಿದಂತೆ ಮಳೆಯ ಅಗತ್ಯತೆ ಇಲ್ಲದ ಜಾಗದಲ್ಲಿ, ಭರ್ಜರಿ ಮಳೆ ಬರುತ್ತಿದೆ. ಅದ್ರಲ್ಲೂ ದಕ್ಷಿಣ ಭಾರತದ ರಾಜ್ಯಗಳ ಸ್ಥಿತಿ ತುಂಬಾ ಕಠಿಣವಾಗಿದ್ದು, ಮಳೆ ಬೇಕೆ ಬೇಕು ಎಂಬ ವಾತಾವರಣ ಇದೆ. ಹೀಗಿದ್ದಾಗ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಗುತ್ತಿದೆ.
ಮಳೆ ನೀರು ಸಂಗ್ರಹ ಮಾಡಿ
ಮನುಷ್ಯನ ಬದುಕಿಗೆ ಮೂಲ ಆಧಾರವೇ ನೀರು, ನೀರು ಇಲ್ಲದೆ ಮನುಷ್ಯನ ಜೀವನ ಊಹೆಗೂ ನಿಲುಕುವುದಿಲ್ಲ. ಹೀಗಾಗಿ ಜೀವಜಲ ಅಂತಾ ಕರೆಯುವ ನೀರನ್ನು ಮನುಷ್ಯ ಸೂಕ್ತ ರೀತಿಯಲ್ಲಿ ಸಂಗ್ರಹ ಮಾಡಿಕೊಳ್ಳಬೇಕು. ಹೀಗಿದ್ರೂ ಮನುಷ್ಯರು ಮಾತ್ರ ನೀರಿನ ಸದ್ಬಳಕೆ ಮಾಡಿಕೊಳ್ತಿಲ್ಲ. ಇದೇ ಕಾರಣಕ್ಕೆ ಮನುಷ್ಯ ಈಗ ಹನಿ ಹನಿ ನೀರಿಗೂ ಪರದಾಡುತ್ತಿದ್ದಾನೆ. ಹೀಗಿದ್ದಾಗ ತಕ್ಷಣಕ್ಕೇ ಎಚ್ಚೆತ್ತುಕೊಂಡು, ಮಳೆ ನೀರು ಸಂಗ್ರಹ ಮಾಡಿಕೊಂಡರೆ ಮುಂದಕ್ಕೆ ಇಂತಹ ಸಮಸ್ಯೆ ಬರಲ್ಲ ಎಂಬ ಮಾತು ಕೇಳಿಬರುತ್ತಿದೆ. ಯಾಕಂದ್ರೆ ಮಳೆಗಾಲದ ಆರಂಭಕ್ಕೆ ಇನ್ನು ಕೇವಲ 1 ತಿಂಗಳು ಬಾಕಿ ಇದೆ. ಹೀಗಾಗಿ ಮಳೆ ನೀರು ಸಂಗ್ರಹಕ್ಕೆ ಈಗಲಾದರೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ.
ಮುಂಗಾರು ಮಳೆ ಅಬ್ಬರ ಶುರು!
ಮೇ 31ಕ್ಕೆ ಮುಂಗಾರು ಮಳೆಯ ಮಾರುತಗಳು ಕೇರಳ ರಾಜ್ಯಕ್ಕೆ ಎಂಟ್ರಿ ಕೊಡಲಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಡೀ ಭಾರತದ ಮಳೆಯ ಪಾಲಿನಲ್ಲಿ ಶೇ. 70 ರಷ್ಟು ಮಳೆಯನ್ನ ಮುಂಗಾರು ಮಳೆ ಒಂದೇ ಸುರಿಸುತ್ತದೆ. ಹೀಗಾಗಿ ಮುಂಗಾರು ಮಳೆ ಕರ್ನಾಟಕ ಸೇರಿ ಇಡೀ ಭಾರತಕ್ಕೆ ಅತ್ಯಂತ ಮುಖ್ಯವಾಗಿದೆ. ಹೀಗಿದ್ದಾಗಲೇ 2023 ರಲ್ಲಿ ಮುಂಗಾರು ಮಳೆ ಕೈಕೊಟ್ಟು ಹೋಗಿತ್ತು. ಹೀಗಾಗಿ ಭೀಕರ ಬರ ಎದುರಾಗಿ ರೈತರು & ಜನ ನರಳಿದ್ದರು. ಆದ್ರೆ ಈಗ ಗುಡ್ ನ್ಯೂಸ್ ಸಿಗುತ್ತಿದ್ದು, ಮುಂಗಾರು ಮಳೆ ಅಬ್ಬರ ಗ್ಯಾರಂಟಿ ಆಗುತ್ತಿದೆ.












Click it and Unblock the Notifications