Rain: ಮಳೆ.. ಮಳೆ.. ಸುರಿಯಲಿದೆ ಭಾರಿ ಭರ್ಜರಿ ಮಳೆ, ಕೊಡೆ ರೆಡಿ ಮಾಡಿ!
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ... ಹಿಂಗೆ ಮುಂಗಾರು ಮಳೆ ಅಬ್ಬರ ಕಂಡು ಜನರು ಕೂಡ ಫುಲ್ ಖುಷಿ ಖುಷಿಯಾಗಿದ್ದಾರೆ. ಯಾಕಂದ್ರೆ ಕರ್ನಾಟಕ ರಾಜ್ಯದಲ್ಲಿ ಭಾರಿ ಭರ್ಜರಿಯಾಗಿ ಇದೀಗ ಮುಂಗಾರು ಮಳೆ ಬೀಳುತ್ತಿದ್ದು, ಜನರು ಕೂಡ ಭಾರಿ ಮಳೆ ಹಿನ್ನೆಲೆಯಲ್ಲಿ ಸಿಕ್ಕಾಪಟ್ಟೆ ಎಂಜಾಯ್ ಕೂಡ ಮಾಡುತ್ತಿದ್ದಾರೆ. ಆದರೆ ಜೂನ್ & ಜುಲೈ ತಿಂಗಳಲ್ಲೇ ಮಿತಿಮೀರಿದ ಮಳೆ ಬೀಳುತ್ತಿರುವ ಕಾರಣಕ್ಕೆ ಈಗ ರೈತರು ಬೆಳೆ ಉಳಿಸಿಕೊಳ್ಳಲು ಚಿಂತೆ ಮಾಡುವಂತೆ ಆಗಿದೆ. ಇಂತಹ ಸಮಯದಲ್ಲೇ ಈಗ ಜುಲೈ 03 ನಂತರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಮಳೆ.. ಮಳೆ.. ಮಳೆ.. ಎಲ್ಲೆಲ್ಲೂ ಮುಂಗಾರು ಮಳೆರಾಯ ಭಾರಿ ಭರ್ಜರಿ ಅಬ್ಬರ ತೋರಿಸುತ್ತಿದ್ದಾನೆ. ಹೌದು, ಜುಲೈ 2 ಬುಧವಾರದಿಂದ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿ ಚಿಕ್ಕಮಗಳೂರು ಭಾಗದಲ್ಲೂ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ ಜೊತೆ ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಜುಲೈ 3 ಗುರುವಾರ ನಂತರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅದರಲ್ಲೂ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಈಗ ಘೋಷಣೆ ಮಾಡಲಾಗಿದ್ದು, ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಜನರು ಕೂಡ ಭಾರಿ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.

ಭಾರಿ ಮಳೆ ಹಿನ್ನೆಲೆ ರಜೆ!
ಮುಂಗಾರು ಮಳೆ ನಂಬಿಕೊಂಡಿದ್ದ ರೈತರಿಗೆ ಖುಷಿಯಾಗಿದೆ. ಎಲ್ಲೆಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ರೈತರು ಖುಷಿಯಾಗಿದ್ದಾರೆ. ಕರ್ನಾಟಕದ ಮೂಲೆ ಮೂಲೆಯಲ್ಲೂ ಭಾರಿ ಮಟ್ಟದಲ್ಲಿ ಮಳೆ ಸುರಿದು ರೈತರು ಕೂಡ ಸಿಕ್ಕಾಪಟ್ಟೆ ಖುಷಿ ಖುಷಿಯಾಗಿದ್ದಾರೆ. ಇಂತಹ ಸಮಯದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 3 ಗುರುವಾರ ನಂತರ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೀಗ ಸಿಕ್ಕಿದೆ. ಬೆಂಗಳೂರು ಸೇರಿ ಕರಾವಳಿ ಪ್ರದೇಶ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿದಂತೆ ಚಿಕ್ಕಮಗಳೂರು ಭಾಗದಲ್ಲೂ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಹಲವು ಕಡೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications