ಕರ್ನಾಟಕದಲ್ಲಿ ಸೆ. 2ರವರೆಗೆ ಎಲ್ಲೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ಆಗಸ್ಟ್ 28: ಹವಾಮಾನದಲ್ಲಿ ಉಂಟಾದ ವೈಪರಿತ್ಯಗಳಿಂದ ಕರ್ನಾಟಕದ ಎಲ್ಲ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸೆಪ್ಟಂಬರ್ 2ರವರೆಗೆ ಸಾಧಾರಣದಿಂದ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

ನೆರೆ ರಾಜ್ಯವಾದ ಆಂಧ್ರ ಪ್ರದೇಶದ ಕರಾವಳಿಯಲ್ಲಿ, ಬಂಗಾಳಕೊಲ್ಲಿ ಸಮುದ್ರದ ಮಧ್ಯದಲ್ಲಿ ಭಾಗ ಹಾಗೂ ಕೇರಳದದ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ತೀವ್ರತೆ ಭಾನುವಾರಕ್ಕೆ ಹೆಚ್ಚಾಗಿದ್ದು, ಹೀಗೆ ಮುಂದಿನ ಐದು ದಿನ ಅದರ ತೀವ್ರತೆ ಮುಂದುವರಿಯುವ ಲಕ್ಷಣಗಳು ಇವೆ. ಈ ಕಾರಣಕ್ಕೆ ಕರ್ನಾಟಕದಾದ್ಯಂತ ಮಳೆ ಅಬ್ಬರ ಪುನಃ ಆರಂಭವಾಗಿದೆ.

ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ ಮೂರು ಜೋರು ಮಳೆ ಅಬ್ಬರಿಸಲಿದೆ. ನಂತರ ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಯಾಗಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ಸೆ.1ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

Heavy rain alert in Karnataka till September 2nd

ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಹಲವೆಡೆ ಭಾನುವಾರದಿಂದ ಮೂರು ದಿನ ಮಳೆ ಅಬ್ಬರಿಸಲಿದೆ. ಇವುಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉಳಿದ ದಿನಗಳಲ್ಲಿ ಇದೇ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24ಗಂಟೆಯಲ್ಲಿ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ ಅಧಿಕ ಮಳೆ 17ಸೆಂ.ಮೀ, ಸುಬ್ರಹ್ಮಣ್ಯದಲ್ಲಿ 14ಸೆಂ.ಮೀ, ಮಂಗಳೂರು, ಹಾವೇರಿ ಜಿಲ್ಲೆಯ ಗುತ್ತಲ, ಮಧುಗಿರಿ ತಲಾ 11ಸೆಂ.ಮೀ, ರಾಣಿಬೆನ್ನೂರು 9ಸೆಂ.ಮೀ, ಕವಡಿಮಟ್ಟಿ, ಕಡತಿನಿ, ಮಿಡಗೇಶಿಯಲ್ಲಿ ತಲಾ 8ಸೆಂ.ಮೀ. ಮಳೆ ದಾಖಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಉಳದಂತೆ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.

Heavy rain alert in Karnataka till September 2nd

ಬೆಂಗಳೂರಿಗೆ ಏನಿದೆ ಮುನ್ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಆಗಸ್ಟ್ 30ರವರೆಗೂ ಭಾರಿ ಮಳೆ ಅಬ್ಬರಿಸಲಿದೆ. ಈ ಪೈಕಿ ಆಗಸ್ಟ್ 29ರಂದು 'ಯೆಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ನಂತರ ಜಿಟಿಜಿಟಿ ರೂಪದಲ್ಲಿ ಮಳೆ ಆರ್ಭಟಿಸಲಿದೆ. ಈ ವೇಳೆ ನಗರದಲ್ಲಿ ಚಳಿಯ ವಾತಾವರಣ ಕಂಡು ಬರಲಿದೆ. ಗರಿಷ್ಠ ತಾಪಾನ 29ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+