Heavy Rain: ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ರಾಜ್ಯದಲ್ಲಿ ಅಬ್ಬರಿಸಿದ್ದ ಹಿಂಗಾರು ಮಳೆ ಸಾಕಷ್ಟು ಅವಾಂತರಕ್ಕೆ ಕಾರಣವಾಗಿತ್ತು. ಹಲವು ಕಡೆಗಳಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು ರೈತರು ನಷ್ಟದ ಭೀತಿಯಲ್ಲಿದ್ದಾರೆ. ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಹಲವು ಕಡೆ ಜನ ಜೀವನ ಅಸ್ತವ್ಯಸ್ತವಾಗಿತ್ತು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಹಲವು ಪ್ರದೇಶಗಳಲ್ಲಿ ಜನ ಮನೆಯಲ್ಲೇ ಲಾಕ್ ಆಗಿದ್ದರು. ಕೆಲವು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು ಜನ ನಿಟ್ಟುಸಿರು ಬಿಟ್ಟಿದ್ದಾರೆ ಇದೀಗ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದೀಪಾವಳಿ ಹಬ್ಬದ ದಿನದಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Heavy Rain Alert Issued for These Districts of Karnataka

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇಲ್ಲವಾದರೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇಂದು ಸಾಧಾರಣ ಮಳೆ

ರಾಜ್ಯದಲ್ಲಿ ಇಂದು (ಮಂಗಳವಾರ) ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಲಿದ್ದು, ಉಳಿದ ಕಡೆ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆ

ದೀಪಾವಳಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಬೆಂಗಳೂರಿಗೆ ಮತ್ತೆ ಮಳೆ ಆತಂಕ ಶುರುವಾಗಿದೆ. ನವೆಂಬರ್ 1 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಬಳ್ಳಾರಿ, ದಾವಣಗರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಲ್ಲೆದೇವರು ಪ್ರದೇಶದಲ್ಲಿ 55.5 ಮಿ.ಮೀ ಮಳೆಯಾಗಿದ್ದು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮನಹಳ್ಳಿಯಲ್ಲಿ 43 ಮಿ.ಮೀ ಮಳೆಯಾಗಿದೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ರಾಮಪುರದಲ್ಲಿ 35 ಮಿ.ಮೀ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+