ಚಂಡಮಾರುತ ಪರಿಚಲನೆ: ಮೇ 18ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು, ಮೇ 16: ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಇದೆ. ಪ್ರಾಥಮಿಕ ಹಂತದಲ್ಲಿರುವ ಈ ವೈಪರಿತ್ಯದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂದಿನ ಮೇ 18ರ ನಂತರ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ. ಕೆಲವು ಜಿಲ್ಲೆಗಳಿಗೆ 'ಆರೆಂಜ್' ಮತ್ತು 'ಯೆಲ್ಲೋ' ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬಂಗಾಳಕೊಲ್ಲಿ ಸಮುದ್ರ ಪೂರ್ವ-ಪಶ್ಚಿಮ ಭಾಗದ ಕೊಮೊರಿನ್ ಪ್ರದೇಶ ಮತ್ತು ದಕ್ಷಿಣ ತಮಿಳುನಾಡಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಚಂಡಮಾರುತದ ಪರಿಚಲನೆ ಕಂಡು ಬಂದಿದೆ. ಇದು ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿದ್ದು, ಲಕ್ಷದ್ವೀಪ ಪ್ರದೇಶಗಳ ಸಾಗುತ್ತಿದೆ.

ಇತ್ತೀಚೆಗೆ ಕರ್ನಾಟಕದ ಒಳನಾಡಿನ ಭೂಮಿ ಮೇಲ್ಭಾಗದಲ್ಲೂ 1.5 ಕಿಮೀ ಎತ್ತರದ ವರೆಗೆ ಸ್ಟ್ರಫ್ ಉಂಟಾಗಿತ್ತು. ಇದರ ಪ್ರಭಾವದಿಂದ ಈಗಾಗಲೇ ಒಳನಾಡು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ.
ಸದ್ಯ ಬಂಗಾಳಕೊಲ್ಲಿ ಮಾತ್ರವಲ್ಲದೇ ಅರಬ್ಬಿ ಸಮುದ್ರದ ದಕ್ಷಿಣ ಮತ್ತು ಪೂರ್ವ ಭಾಗದಲ್ಲಿ ಪ್ರಾಥಮಿಕ ಹಂತದಲ್ಲಿ ಸುಳಿಗಾಳಿಯೊಂದು ಸೃಷ್ಟಿಯಾಗಿದೆ. ಸದ್ಯ ಇದು ಆರಂಭಿಕ ಹಂತದಲ್ಲಿ ಎಂದು ತಿಳಿದು ಬಂದಿದೆ. ಈ ಹವಾಮಾ ವೈಪರಿತ್ಯಗಳ ಪ್ರಭಾವದಿಂದಾಗಿ ಕರ್ನಾಟಕದ ಈ ಕೆಳಗಿನ ಜಿಲ್ಲೆಗಳಲ್ಲಿ ಮುಂದಿನ ಮೇ 19ರಿಂದ ಮೂರು ದಿನ ಬಿರುಗಾಳಿ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಆರೆಂಜ್ ಅಲರ್ಟ್ ಜಿಲ್ಲೆಗಳು
ಮೇ. 19 ಮತ್ತು 20 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಬ್ಬಳ್ಳಾಪುರ, ಕೊಡಗು, ಕೋಲಾರ ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದೆ. ಗರಿಷ್ಠ 20 ಸೆಂಟಿ ಮೀಟರ್‌ವರೆಗೂ ಇಲ್ಲಿ ಮಳೆ ಆಗುವ ಸಾಧ್ಯತೆ ಇರುವ ಕಾರಣಕ್ಕೆ ಈ ಜಿಲ್ಲೆಗಳಿಗೆ 'ಕಿತ್ತಳೆ' ಎಚ್ಚರಿಕೆ (Orange Alert) ಕೊಡಲಾಗಿದೆ.

ಯೆಲ್ಲೋ ಅಲರ್ಟ್ ಪಡೆದ ಜಿಲ್ಲೆಗಳು
ಮೇ. 19 ಮತ್ತು 20 ರಂದು ಎರಡು ದಿನ ಕರಾವಳಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು, ದಕ್ಷಿಣ ಒಳನಾಡಿನ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಭಾರೀ ಮಳೆ ಆಗಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಮೇಲಿನ ಜಿಲ್ಲೆಗಳ ಪೈಕಿ ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಕೊಡಗು, ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಾಳೆ ಶುಕ್ರವಾರ ಮೇ 17ರಿಂದ ಸಕ್ರಿಯವಾಗಲಿದೆ. ಇಲ್ಲಿ ನಾಳೆಯಿಂದಲೇ ಬಿರುಗಾಳಿ ಸಹಿತ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಕರ್ನಾಟಕಕ್ಕೆ ಏನಿದೆ ಮುನ್ಸೂಚನೆ?
ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಂಡಮಾರುತ ಪರಿಚಲನೆ ಪ್ರಭಾವ ಅಷ್ಟಾಗಿಲ್ಲ ಎನ್ನಲಾಗಿದೆ. ನಾಳೆ ಮೇ 17ರಿಂದ ಈ ಭಾಗದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬೀದರ್ ಜಿಲ್ಲೆಗಳಲ್ಲಿ ಒಣಹವೆ-ಬಿಸಿಲಿನ ಪ್ರಮಾಣ ತುಸು ಇಳಿಕೆ ಆಗಲಿದೆ. ಮಳೆಯ ತಂಪು ವಾತಾವರಣ ಕಂಡು ಬರುತ್ತದೆ. ಆದರೂ ಸಹಿತ ಸಾಧಾರಣ ಮಳೆ ನಿರೀಕ್ಷೆ ಇದೆ. ಅಲ್ಲಲ್ಲಿ ಒಂದೆರಡು ಕಡೆ ಜೋರು ಮಳೆ ಆಗಲಿದೆ.
ಚಂಡಮಾರುತ ಪರಿಚಲನೆ ಪ್ರಭಾವ ಮುಂದಿನ ಒಂದು ವಾರವು ರಾಜ್ಯದ ಮೇಲೆ ಬೀಳಬಹುದಾದ ಸಾಧ್ಯತೆಗಳು ಇವೆ. ಇದರಿಂದಾಗಿ ರಾಜ್ಯವು ಮುಂದಿನ ದಿನಗಳಲ್ಲಿ ತಂಪು ವಾತಾವರಣ ಕಾಣಲಿದೆ. ಈ ವರ್ಷ ಪೂರ್ವ ಮುಂಗಾರು ಮಳೆ ಅಂತ್ಯ ಮತ್ತು ಮುಂಗಾರು ಮಳೆ ಆರಂಭದ ಸಂದರ್ಭದಲ್ಲಿ ಭಾರೀ ಮಳೆಯಾರ್ಭಟಕ್ಕೆ ಕರ್ನಾಟಕ ಸಾಕ್ಷಿಯಾಗಲಿದೆ.
ರಾಜ್ಯದಲ್ಲಿ ನೆನ್ನೆ ಬಿದ್ದ ಮಳೆ ಪ್ರಮಾಣ
ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಉಡುಪಿ ಮತ್ತು ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಅತ್ಯಧಿಕ 07 ಸೆಂಟಿ ಮೀಟರ್ ಮಳೆ ದಾಖಲಾಗಿದೆ. ಉಳಿದಂತೆ ವಿಜಯಪುರ, ಚಿಕ್ಕಮಗಳೂರಲ್ಲಿ ತಲಾ 6 ಸೆಂ.ಮಿ., ಬಾಗಲಕೋಟೆ, ಕಲಬುರಗಿ ಜಿಲ್ಲೆಯಲ್ಲಿ ತಲಾ 05 ಸೆಂ.ಮೀ, ಕೊಪ್ಪಳದಲ್ಲಿ 4 ಸೆಂಟಿ ಮೀಟರ್ ಮಳೆ ಆಗಿದೆ. ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಧಾರವಾಡ ವ್ಯಾಪ್ತಿಯಲ್ಲಿ ಹೆಚ್ಚು ಮಳೆ ಬಂದಿದೆ.
ಇಂದು ಸುರಿದ ಭಾರಿ ಮಳೆ
ಇಂದು ಸಹ ರಾಜ್ಯ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಿದೆ. ಮಡಿಕೇರಿ, ಶಿವಮೊಗ್ಗ, ಬೆಳಗಾವಿ, ಹಾವೇರಿ, ಕೊಡಗು, ವಿಜಯನಗರ ಜಿಲ್ಲೆ, ಭದ್ರಾವತಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಿದೆ. ಗುಡುಗು, ಮಿಂಚು ಸಹಿತ ಸುರಿದ ಮಳೆಯ ಕೆಲವು ಫೋಟೋ ಮತ್ತು ವಿಡಿಯೋಗಳನ್ನು ಕರ್ನಾಟಕ ವೆದರ್ ಟ್ವಿಟ್ಟರ್ ಹ್ಯಾಂಡಲ್ ಹಂಚಿಕೊಂಡಿದೆ.
ಗರಿಷ್ಠ ತಾಪಮಾನದಲ್ಲಿ ತೀವ್ರ ಇಳಿಕೆ
ಕರ್ನಾಟಕ ರಾಜ್ಯದಲ್ಲಿ ಕಳೆದೊಂದು ವಾರದಿಂದ ತಾಪಮಾನ ಕ್ರಮೇಣ ಇಳಿಕೆ ಆಗಿದೆ. ಗರಿಷ್ಠ 47 ಡಿಗ್ರಿ ಸೆಲ್ಸಿಯಸ್ ತಲುಪಿದ್ದ ರಾಜ್ಯದಲ್ಲಿ ಹವಾಮಾನ ಬದಲಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಶಿರಾಲಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ. ಇನ್ನೂ 36 ಡಿಗ್ರಿ ಸೆಲ್ಸಿಯಸ್ ತಾಪಮಾನವು ಕಲಬುರಗಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ದಾಖಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಇದಕ್ಕಿಂತಲೂ ಕಡಿಮೆ ಬಿಸಿಲಿನ ತಾಪ ಕಂಡು ಬಂದಿದೆ ಎಂದು ಇಂದಿನ ಐಎಂಡಿ ವರದಿ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ತಂಪು ವಾತಾವರಣವೇ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಕಂಡು ಬಂದಿದ್ದು, ಗುರುವಾರವು ತಡರಾತ್ರಿ ಮಳೆ ಯಾಗಿದೆ. ವಿಶೇಷ ವೆಂದರೆ ಈದುವರೆಗೆ ಮಳೆ ಕಾಣ ರಾಜ್ಯದ ಕೆಲವು ಜಿಲ್ಲೆಗಳಲ್ಲೂ ಮಳೆ ಸುರಿಯಲು ಆರಂಭಿಸಿದೆ.
ಇಂದು ಬೆಂಗಳೂರಿನಲ್ಲಿ ದಿನವಡೀ ಮೋಡ ಕವಿದ ವಾತಾವರಣವೇ ಕಂಡು ಬಂದಿದೆ. ಕೆಲವೆಡೆ ತುಂತುರು ಮಳೆ ಆಗಿದೆ. ಅಲ್ಲದೇ, ರಾಜ್ಯದಲ್ಲಿ ಆಗುತ್ತಿರುವ ಮಳೆಯಿಂದ ಕೆರೆ ಕಟ್ಟೆಳಲ್ಲಿ ನೀರಿನ ಸಂಗ್ರಹವಾಗುತ್ತಿದೆ. ವಾತಾವರಣ ತಂಪಿನಿಂದ ಕೂಡಿದೆ.
-
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications