Rain Alert: ತುಮಕೂರು, ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
ಡಿಸೆಂಬರ್ ತಿಂಗಳಾದರೂ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿಲ್ಲ. ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರ ವ್ಯಾಪಕ ಮಳೆಯಾಗಿದ್ದರೆ. ಈ ವಾರ ಕೂಡ ವಾಯುಭಾರ ಕುಸಿತದಿಂದ ಮತ್ತೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಇನ್ನೆರೆಡು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ 64.5 ಮಿಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಧ್ಯಾಹ್ನದ ವೇಳೆಗೆ ನಗರದ ಬಹುತೇಕ ಕಡೆಗಳಲ್ಲಿ ತುಂತುರು ಮಳೆ ಸುರಿಯುತ್ತಲೇ ಇದ್ದು, ಸಂಜೆ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ತುಂತುರು ಮಳೆ
ಗುರುವಾರ ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವು ಕಡೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ವಾತಾವರಣ ತಂಪಾಗಿದ್ದು ಚಳಿ ಹೆಚ್ಚಾಗಿದೆ. ರಾಜಾಜಿನಗರ, ಮಲ್ಲೇಶ್ವರ, ಯಶವಂತಪುರ, ಜಾಲಹಳ್ಳಿ, ದಾಸರಹಳ್ಳಿ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು ನೌಕರರು ಮತ್ತು ವಿದ್ಯಾರ್ಥಿಗಳು ಮಳೆಯಲ್ಲೇ ಶಾಲೆ, ಕೆಲಸಕ್ಕೆ ಹೋಗಬೇಕಾಯಿತು.
ಮಧ್ಯಾಹ್ನದ ವೇಳೆಗೆ ನಗರದ ಬಹುತೇಕ ಕಡೆಗಳಲ್ಲಿ ತುಂತುರು ಮಳೆ ಸುರಿಯುತ್ತಲೇ ಇದ್ದು, ಸಂಜೆ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಡಿಸೆಂಬರ್ ಮಳೆಗೆ ಕಾರಣವೇನು?
ಹಿಂದೂ ಮಹಾಸಾಗರದ ದಕ್ಷಿಣ ಭಾಗದ ಮನ್ನಾರ್ ಕೊಲ್ಲಿ ಮತ್ತು ನೆರೆ ಭಾಗದ ಪ್ರದೇಶಗಳಲ್ಲಿ ವಾಯುಭಾರ ಕುಸಿತವಾಗಿರುವುದೇ ಈ ಮಳೆಗೆ ಕಾರಣವಾಗಿದೆ. ತೇವಾಂಶದಿಂದ ಕೂಡಿದ ಗಾಳಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವ ಸಾಧ್ಯತೆಯಿದ್ದು ಮುಂದಿನ 12 ಗಂಟೆಗಳಲ್ಲಿ ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ ಇಂದು ಮತ್ತು ನಾಳೆ (ಡಿಸೆಂಬರ್ 12, 13) ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಇರುವ ಮುನ್ಸೂಚನೆ ಇದೆ. ಡಿಸೆಂಬರ್ 17 ರಿಂದ 19ರವರೆಗೆ ಮತ್ತೊಮ್ಮೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications