ಕರ್ನಾಟಕ; ಜೂನ್ 29ರ ತನಕ ವಿವಿಧ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಜೂನ್ 28 : ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೂನ್ 29ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂನ್ 29ರ ತನಕ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಣೆ ಮಾಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೀದರ್, ಹಾವೇರಿ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಯಲ್ಲಿಯೂ ಮಳೆಯಾಗಲಿದೆ.
ಶುಕ್ರವಾರ ಮತ್ತು ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕುಣಿಗಲ್‌ನಲ್ಲಿ 14 ಸೆಂ. ಮೀ. ಹೆಚ್ಚು ಮಳೆಯಾಗಿದೆ. ಹೊಸದುರ್ಗ, ಆನೇಕಲ್‌ನಲ್ಲಿ 10, ಯಲಬುರ್ಗ ಅಥಣಿಯಲ್ಲಿ 9 ಸೆಂ. ಮೀ. ಮಳೆ ಸುರಿದಿದೆ.












Click it and Unblock the Notifications