Karnataka Rain: ರಾಜ್ಯದ ಈ ಜಿಲ್ಲೆಗಳಿಗೆ ವರ್ಷದ ಮೊದಲ ಮಳೆಯ ಸಿಂಚನ

2025ರಲ್ಲಿ ಕರ್ನಾಟಕ ರಾಜ್ಯದ ಹಲವು ಕಡೆಗಳಲ್ಲಿ ಮೊದಲ ಮಳೆಯ ದರ್ಶನವಾಗಿದೆ. ಗುರುವಾರ ಸಂಜೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿರುವುದಾಗಿ ವರದಿಯಾಗಿದೆ. ಹಾವೇರಿ, ವಿಜಯನಗರ ಮತ್ತು ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಜನರಲ್ಲಿ ಸಂತಸ ಮೂಡಿಸಿದೆ.

ಗುರುವಾರ ಸಂಜೆ ಹಲವು ಕಡೆಗಳಲ್ಲಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿತ್ತು. ಅದರಂತೆಯೇ ರಾಜ್ಯದಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಹಾವೇರಿ ನಗರದಲ್ಲಿ ಸಂಜೆ 6 ಗಂಟೆಗೆ ತುಂತುರು ಮಳೆಯಾಗಿದ್ದು, ರಾಣೆಬೆನ್ನೂರಿನಲ್ಲಿ ರಾತ್ರಿ 9 ಗಂಟೆ ವೇಳೆಗೆ ಸಾಧಾರಣ ಮಳೆಯಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

Heavy rain at kodagu vijayanagara and haveri districts first in year

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ

ಕೊಡಗು ಜಿಲ್ಲೆಯಲ್ಲಿ ಕೂಡ ಗುರುವಾರ ಉತ್ತಮ ಮಳೆಯಾಗಿದೆ. ಮೋಹನ್ ದೇವಯ್ಯ ಎನ್ನುವ ಟ್ವಿಟರ್ ಬಳಕೆದಾರರು ತಮ್ಮ ಖಾತೆಯಲ್ಲಿ ಮಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕಕ್ಕಬೆ - ಕುಂಜಿಲ ಎನ್ನುವಲ್ಲಿ 1.5 ಇಂಚು ಮಳೆಯಾಗಿದೆ ಎಂದು ಮೋಹನ್ ದೇವಯ್ಯ ಎಕ್ಸ್‌ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬೀರಬ್ಬಿ ಗ್ರಾಮದಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ವೀಕ್ಷಕರಾದ ನವೀನ್ ರೆಡ್ಡಿ ಎನ್ನುವವರು ತಮ್ಮ ಎಕ್ಸ್ ಖಾತೆಯಲ್ಲಿ ಮಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಬೇಸಿಗೆ ಶುರುವಾಗುವ ಮುನ್ನವೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿರುವುದು ಈ ಬಾರಿ ಉತ್ತಮ ಮಳೆಯ ಮುನ್ಸೂಚನೆ ಸಿಕ್ಕಂತಾಗಿದೆ. ಹವಾಮಾನ ಇಲಾಖೆ ಅಧಿಕಾರಿಗಳು ಕೂಡ ಈ ಬಾರಿ ರಾಜ್ಯದಲ್ಲಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಉತ್ತಮ ಮುಂಗಾರು ಪೂರ್ವ ಮಳೆ

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫೆಬ್ರವರಿ ಮತ್ತು ಮಾರ್ಚ್ ಕೊನೆಯ ವಾರದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿದ್ದರೂ, ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಬಹುದು ಎಂದು ಅಧಿಕಾರಿಗಳು ನಿರೀಕ್ಷೆ ಮಾಡಿದ್ದಾರೆ.

ಕಳೆದ ವರ್ಷದಂತೆ ಈ ಬಾರಿ ಕೂಡ ಉತ್ತಮ ಮಳೆಯಾಗಲಿ, ಕೃಷಿಗೆ ಮತ್ತು ಕುಡಿಯುವ ನೀರಿಗೆ ಯಾವ ಸಮಸ್ಯೆಯೂ ಬರದಂತಾದರೆ ಸಾಕು ಎಂದು ರಾಜ್ಯದ ಜನ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+