ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಮೇ 20: ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲು ಒಂದೆರೆಡ್ಮೂರು ವಾರಗಳು ಮಾತ್ರ ಬಾಕಿ ಇವೆ. ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

ಕೇರಳಕ್ಕೆ ಜೂನ್ 6ರಂದು ಮುಂಗಾರು ಪ್ರವೇಶಿಸಲಿದ್ದು ಕರ್ನಾಟಕಕ್ಕೆ ಜೂನ್ 8-9ಕ್ಕೆ ಮುಂಗಾರು ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.

ಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆ

ಮುಂಗಾರು ಆರಂಭಕ್ಕೂ ಮುನ್ನವೇ ಪೂರ್ವ ಮುಂಗಾರು ಮಳೆ ಅಲ್ಲಲ್ಲಿ ಸುರಿಯುತ್ತಿದೆ. ಕೇವಲ ಮಳೆಯಷ್ಟೇ ಅಲ್ಲದೆ ಆಲಿಕಲ್ಲು ಮಳೆ ಅನಾಹುತವನ್ನೇ ಸೃಷ್ಟಿ ಮಾಡುತ್ತಿದೆ.

Heavy rain chances in Southern Karnataka

ಕಳೆದ ಮೂರು ನಾಲ್ಕು ದಿನಗಳಿಂದ ಗಾಳಿ ಒತ್ತಡ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಿತ್ತು.

ಕೆಲವು ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ದೊರೆತಿದೆ. ಇನ್ನು ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಗಾಳಿ ಪ್ರಭಾವ ಹೆಚ್ಚಾಗಲಿದೆ. ಸಧ್ಯಕ್ಕೆ ಉಷ್ಣಾಂಶದಲ್ಲಿ ಇಳಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಭಾನುವಾರ ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗ, ದಾವಣಗೆರೆ, ರಾಮನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಿದೆ.

ಬೆಂಗಳೂರಿಗೆ ಮತ್ತೆ ತಂಪೆರೆದ ಮಳೆರಾಯ, ಹಲವೆಡೆ ಆಲಿಕಲ್ಲು ಮಳೆಬೆಂಗಳೂರಿಗೆ ಮತ್ತೆ ತಂಪೆರೆದ ಮಳೆರಾಯ, ಹಲವೆಡೆ ಆಲಿಕಲ್ಲು ಮಳೆ

ಬೆಂಗಳೂರಲ್ಲಿ ಗರಿಷ್ಠ 34.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24.4 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 35.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

English summary
KSNDMC issued Heavy rain warning in Southern Karnataka next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X