• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

|

ಬೆಂಗಳೂರು, ಜೂನ್ 10: ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಇಂದು ಭಾರಿ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ನೀಡಿದೆ.

ವಾಯುಭಾರ ಕುಸಿತದಿಂದ ಮುಂಗಾರು ದುರ್ಬಲವಾಗುವ ಸಾಧ್ಯೆತೆಯೂ ಹೆಚ್ಚಿದೆ ಎನ್ನಲಾಗುತ್ತಿದೆ.ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದ ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ತೀರಗಳಲ್ಲಿ ಹೆಚ್ಚು ಮಳೆಯಾಗಲಿದೆ.

ಮುಂದಿನ 8-10 ಗಂಟೆಗಳಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಮಳೆ

ರಾಜ್ಯದ ಕರಾವಳಿ ತೀರದಲ್ಲಿ ಜೂನ್ 11ವರೆಗೆ ಕಟ್ಟೆಚ್ಚರವಹಿಸುವಂತೆ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಬಲವಾದ ಗಾಳಿ, ಸಮುದ್ರದ ಅಲೆಗಳ ಅಬ್ಬರ ಹಾಗೂ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಶನಿವಾರ ಕೇರಳ ಕಡಲ ತೀರಕ್ಕೆ ಮುಂಗಾರು ಪ್ರವೇಶಿಸಿದೆ. ಮುಂಗಾರು ದುರ್ಬಲವಾಗಿರುವುದರಿಂದ ಜೂನ್ 11ರ ಬಳಿಕ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಆದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದ ಮಳೆಯಾಗುವುದು ಅನುಮಾನವಾಗಿದೆ ಎನ್ನುವುದು ಹವಾಮಾನ ಇಲಾಖೆ ಅಭಿಪ್ರಾಯವಾಗಿದೆ.

English summary
Depression in Arabian sea, Heavy rain chances are across the state. This will be the pre monsoon rain,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X