Rain Alert: ಚಿಕ್ಕಮಗಳೂರಲ್ಲಿ ಭರ್ಜರಿ ಮಳೆ, ಪರದಾಡಿದ ಜನ!

ಮಳೆ.. ಮಳೆ.. ಮಳೆ.. ಹಿಂಗೆ ಜನರು ಭರ್ಜರಿ ಮಳೆ ನೋಡಿ ಫುಲ್ ಖುಷಿಯಾಗಿದ್ದಾರೆ. ಈ ಮಧ್ಯೆ ಬೇಸಿಗೆ ಸಮಯದಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಕಾರಣಕ್ಕೆ ರೈತರು ಕೂಡ ಫುಲ್ ಖುಷಿಯಾಗಿದ್ದಾರೆ. ಹಾಗೇ ಮಲೆನಾಡು ಚಿಕ್ಕಮಗಳೂರಲ್ಲಿ ಕೂಡ ಭರ್ಜರಿ ಮಳೆಯ ಆರ್ಭಟ ಶುರುವಾಗಿದ್ದು, ಎಲ್ಲೆಲ್ಲೂ ಬರೀ ನೀರೇ ತುಂಬಿದೆ. ರಸ್ತೆಯಲ್ಲಿ, ನೀರು ತುಂಬಿದ ಪರಿಣಾಮ ವಾಹನ ಸವಾರರು, ಬಸ್‌ಗಳು ಓಡಾಡಲು ಪರದಾಡಿದವು.

ಚಿಕ್ಕಮಗಳೂರು ನಗರ ಸೇರಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರಿ ಗಾಳಿ ಸಹಿತ ಧಾರಾಕಾರ ಮಳೆ ಬಿದ್ದಿದೆ. ಹಾಗೆ ಚಿಕ್ಕಮಗಳೂರಿನ ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆ ಬಿದ್ದಿದೆ. ಇನ್ನು ಚಿಕ್ಕಮಗಳೂರು ನಗರ , ಮಲ್ಲೇನಹಳ್ಳಿ, ಖಾಂಡ್ಯ, ಮುತ್ತೋಡಿ ಭಾಗದಲ್ಲಿಯೂ ಭಾರೀ ಮಳೆ ಬಂದಿದ್ದು, ಸುಮಾರು 2 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಕಳೆದ 3 ದಿನಗಳಿಂದಲು ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಾಗೇ ಬಯಲುಸೀಮೆ ಭಾಗವಾದ ತರೀಕೆರೆ, ಕಡೂರಿನಲ್ಲಿ ಕೂಡ ಸಾಧಾರಣ ಮಳೆ ಬಿದ್ದಿದೆ.

Heavy Rain Chikkamagaluru District Got Heavy Rain In Karnataka

ಮಳೆ ಅಬ್ಬರ ಮತ್ತಷ್ಟು ಹೆಚ್ಚಾಗುತ್ತೆ!

ಹೀಗೆ ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಬಿದ್ದಿರುವುದು ಜನರಿಗೆ ಕೂಡ ಖುಷಿ ಕೊಟ್ಟಿದೆ. ಈ ಮೂಲಕ ರೈತರು ಒಂದಷ್ಟು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಬಿಸಿಲ ಝಳಕ್ಕೆ ಜನ ಕಂಗಲಾಗಿದ್ದರು. ಆದರೆ ಇದೀಗ ಭರ್ಜರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ವಾತಾವರಣ ಕೂಡ ಒಂದಷ್ಟು ತಂಪಾಗಿದೆ. ಹೀಗಾಗಿ ಜನರಿಗೆ ನೆಮ್ಮದಿ ಸಿಕ್ಕಂತಾಗಿದೆ. ಇನ್ನು ಹಲವು ದಿನ ಕಾಲ ಇದೇ ರೀತಿ ಮಳೆ ಮುಂದುವರಿಯಲಿದೆ, ಎಂದು ಹವಾಮಾನ ಇಲಾಖೆ ಮಾಹಿತಿ ನೀಡುತ್ತಿದೆ.

ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ

ಕರ್ನಾಟಕದ ಕರಾವಳಿ ಜಿಲ್ಲೆ ಸೇರಿ ಬೆಂಗಳೂರು ನಗರ, ಬೆಂಗಳೂರು ಗ್ರಾಂ. ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು & ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಖುಷಿ ಕೊಟ್ಟಿದೆ. ಹಾಗೇ ಇಂದು ಕೂಡ ಭರ್ಜರಿ ಮಳೆ ಬಿದ್ದಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಬೀಳುತ್ತೆ ಎಂಬ ಮುನ್ಸೂಚನೆ ನೀಡಲಾಗಿದೆ.

ಬರದ ನಡುವೆ ಭರ್ಜರಿ ಮಳೆ

ಮಳೆ ಇಲ್ಲದೆ ಕನ್ನಡಿಗರು ನರಳಾಡಿ ಹೋಗಿದ್ದಾರೆ, ಅದರಲ್ಲೂ ಹಳ್ಳಿಗಳಲ್ಲಿ ಕೆರೆ & ಕುಂಟೆ ಬತ್ತಿ ಹೋಗಿ ಬರಡು ಭೂಮಿಯಾಗಿ ಬದಲಾಗಿವೆ. ಇದರ ಜೊತೆಗೆ ಬಿಸಿಲಿನ ಝಳವೂ ಹೆಚ್ಚಾಗಿ ಏನು ಮಾಡಬೇಕು ಅಂತ ಕನ್ನಡಿಗರು ಪರಿತಪಿಸುವ ಸಮಯದಲ್ಲಿ ಭರ್ಜರಿ ಮಳೆ ಬಂದಿದ್ದು ಭೂಮಿ ತಂಪಾಗಿದೆ. ಮುಂಗಾರು ಮಳೆ ಕೈಕೊಟ್ಟಿದ್ದ ಕಾರಣ 2023 ರಲ್ಲಿ ಬರದ ಬೇಗೆಯಲ್ಲಿ ಕರ್ನಾಟಕ ಬೆಂದು ಹೋಗಿ ಜನರು ಪರದಾಡಿದ್ದಾರೆ. ಈಗ ಬೇಸಿಗೆ ಮಳೆ ಒಂದಷ್ಟು ನೆಮ್ಮದಿ ನೀಡಿದ್ದು, ರೈತರು ಬೆಳೆ ಉಳಿಸಿಕೊಳ್ಳುವ ಚಡಪಡಿಕೆಯಲ್ಲಿ ಕೂತಿದ್ದಾರೆ.

ಮುನಿಸಿಕೊಂಡಿದ್ದ ಮಳೆರಾಯ ಸೈಲೆಂಟ್!

ಕನ್ನಡಿಗರ ಮೇಲೆ ಮುನಿಸಿಕೊಂಡಿದ್ದ ವರುಣ ದೇವ ಇದೀಗ ಒಂದಷ್ಟು ಕರುಣೆ ತೋರಿಸಿದ್ದಾನೆ. ರಾಜ್ಯದಲ್ಲಿ ಬೇಸಿಗೆ ಬಿರು ಬಿಸಿಲಿನ ನಡುವೆ ಭಾರಿ ಮಳೆಯೂ ಶುರುವಾಗಿದೆ. ಅದರಲ್ಲೂ ಕನ್ನಡ ನಾಡಿನ ಮಲೆನಾಡು ಭಾಗ, ಕರಾವಳಿ ಪ್ರದೇಶದಲ್ಲಿ ಸುರಿಯುತ್ತಿದ್ದ ಮಳೆ ಈಗ ಬಯಲು ಸೀಮೆ ಪ್ರದೇಶವಾದ ಉತ್ತರ ಕರ್ನಾಟಕದಲ್ಲಿ ಕೂಡ ಅಬ್ಬರಿಸಲು ಶುರು ಮಾಡಿದೆ. 4-5 ವರ್ಷದಿಂದ ಬೆಂಗಳೂರು & ಕರ್ನಾಟಕದ ಜನ ಭಾರಿ ಮಳೆಗೆ ಬೆಚ್ಚಿ ಬಿದ್ದಿದ್ದರು. ಅದ್ರಲ್ಲೂ ತಗ್ಗು ಪ್ರದೇಶದ ಜನಗಳಿಗೆ ಮಳೆ ನೀರು ಸಮಸ್ಯೆ ಕೊಟ್ಟಿತ್ತು ಆದರೆ ಕಳೆದ ವರ್ಷ ಮಳೆ ನಾಪತ್ತೆ. ಹೀಗಾಗಿ 2024ರ ಬೇಸಿಗೆ ಆರಂಭಕ್ಕೆ ಮೊದಲೇ ನೀರಿಗೆ ಕೊರತೆ ಉಂಟಾಗಿತ್ತು. ಜನ ಹನಿ ಹನಿ ನೀರಿಗೆ ನರಳಿದ್ದರು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮತ್ತೊಮ್ಮೆ ಮಳೆರಾಯ ಅಬ್ಬರಿಸಲು ಶುರು ಮಾಡಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+