Karnataka Rain: ಭಾರೀ ಮಳೆ, ಚಿತ್ರದುರ್ಗ, ಬೆಳಗಾವಿ ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು, ಜುಲೈ 26: ಕರ್ನಾಟಕದಲ್ಲಿ ಇಂದು ಜುಲೈ 26ರಂದು ಸಹ ವಿವಿಧ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಒಟ್ಟು ಸುಮಾರು ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ರಜೆ ಘೋಷಣೆ ಮಾಡಿವೆ.

ಒಟ್ಟಾರೆ ಮುಂದಿನ 24 ಗಂಟೆ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳು ಒಂಗೊಂಡಂತೆ ರಾಜ್ಯಾದ್ಯಂತ ಭಾರೀ ಮಳೆ ಆಗಲಿದೆ (Karnataka rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Heavy Rain Continues In Karnataka, Holiday Announced Schools-Colleges Of 6 District On 26th

ಹೀಗಾಗಿ ಇಂದು ಜುಲೈ 26ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ. ಇತ್ತ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸಹ ಮಳೆ ಭೀತಿಯಿಂದ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ನೀಡಿ ಆದೇಶ ಹೊರಡಿಸಲಾಗಿದೆ.

ಕರಾವಳಿಗೆ ರೆಡ್ ಅಲರ್ಟ್‌ ಇರುವ ಕಾರಣ ಭಾರೀಯಿಂದ ಅತೀ ಭಾರಿ ಮಳೆ ಮುಂದುವರಿಯಲಿದೆ. ಈಗಾಗಲೇ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಮಕ್ಕಳ ಹಿತರಕ್ಷಣೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

Heavy Rain Continues In Karnataka, Holiday Announced Schools-Colleges Of 6 District On 26th

ಅದಷ್ಟೇ ಅಲ್ಲದೆ ಖಾಸಗಿ ವಿದ್ಯಾಸಂಸ್ಥೆಗಳಿಗೂ ರಜೆ ಘೋಷಿಸಲಾಗಿದ್ದು, ಕಾಲೇಜುಗಳ ತರಗತಿಗಳನ್ನು ಆನ್‌ಲೈನ್‌ ಮೂಲಕವೇ ನಡೆಸುವಂತೆ ಸೂಚಿಸಲಾಗಿದೆ. ಅದೇ ರೀತಿ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಇವತ್ತು ಸಹ ಜೋರು ಮಳೆ ಬರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಇನ್ನೂ ಉಡುಪಿಯ ಶಾಲಾ ಕಾಲೇಜುಗಳಿಗೆ ಇವತ್ತಿನ ರಜೆ ಸೇರಿ ಸತತವಾಗಿ ಮೂರು ದಿನಗಳಿಂದ ರಜೆ ನೀಡಿದಂತಾಗಿದೆ. ಆದರೆ ಇಲ್ಲಿನ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 2 ದಿನ ರಜೆ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಇದು ಮುಂದಿನ 48 ಗಂಟೆಗಳ ಕಾಲ ಹೀಗೆ ಮುಂದುವರಿಯಲಿದೆ. ಈ ಸಂಬಂಧ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಇಂದು ಬುಧವಾರ ಮತ್ತು ನಾಳೆ ಗುರುವಾರ (ಜುಲೈ 26, 27) ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಬೆಳಗಾವಿಯ ಆರು ತಾಲೂಕುಗಳಲ್ಲಿ ರಜೆ ಘೋಷಣೆ, ವಿವರ

ರಾಜ್ಯದ ಎರಡನೇ ಬೃಹತ್ ಜಿಲ್ಲೆಯಾದ ಬೆಳಗಾವಿ ಮಳೆಯಾರ್ಭಟ ಮುಂದುವರಿದಿದೆ. ಹೀಗಾಗಿ ಬೆಳಗಾವಿ ತಾಲೂಕು, ಬೆಳಗಾವಿ ನಗರ, ಸವದತ್ತಿ, ಯರಗಟ್ಟಿ, ಖಾನಾಪುರ, ಮೂಡಲಗಿ, ನಿಪ್ಪಾಣಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಈ ಆರು ತಾಲೂಕುಗಳ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ರಜೆ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆ ಜಿಲ್ಲೆ ವ್ಯಾಪ್ತಿಯ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+