Karnataka Rains : ಕರ್ನಾಟಕಕ್ಕೆ ಭಾರಿ ಮಳೆ ಸಂಭವ: 3 ಜಿಲ್ಲೆಗೆ ಹಳದಿ ಎಚ್ಚರಿಕೆ: IMD

ಬೆಂಗಳೂರು, ಡಿಸೆಂಬರ್ 07: ಕರ್ನಾಟಕದಲ್ಲಿ ಡಿಸೆಂಬರ್ 9ರಿಂದ 11ರವರೆಗೆ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಒಂದೆರಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕೇಂದ್ರ ಮುನ್ಸೂಚನೆ ನೀಡಿದೆ.

ಡಿಸೆಂಬರ್ 9ರಂದು ಮೊದಲ ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮಾತ್ರ ಹಗುರ ಮಳೆ ಬೀಳಲಿದೆ. ನಂತರ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ, ರಾಮನಗರ, ದಾವಣಗೆರೆ ಮತ್ತು ಚಿತ್ರದುರ್ಗಗಳಲ್ಲಿ ಗುಡುಗು ಸಹಿತ ಸಾಧಾರಣವಾಗಿ ಮಳೆ ಬೀಳಲಿದೆ.

ಮರುದಿನ ಡಿಸೆಂಬರ್ 11ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಂಭವವಿದೆ. ಹೀಗಾಗಿ ಅಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

Heavy Rain Expect for 3 Districts Of Karnataka On December 11 Yellow Alert Announced By IMD

ಬೆಂಗಳೂರಲ್ಲಿ ಚಳಿ ಮುಂದುವರಿಕೆ

ಮಳೆ ನಿಗದಿತ ಈ ಮೂರು ದಿನದಲ್ಲಿ ಕರಾವಳಿ ಭಾಗದಲ್ಲಿ ಆಗಾಗ ವ್ಯಾಪಕ ಮಳೆ ಬೀಳಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 10 ಮತ್ತು 11ರಂದು ಮಾತ್ರ ಕೆಲವು ಕಡೆಗಳಲ್ಲಿ ತುಂತುರು ಮಳೆ ಬೀಳಬಹುದು. ಅಲ್ಲಿಯವರೆಗೆ ಈ ಭಾಗದಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವೇ ಕಂಡು ಬರಲಿದ್ದು, ಕೆಲವು ಕಡೆಗಳಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ಉಂಟಾಗಲಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Heavy Rain Expect for 3 Districts Of Karnataka On December 11 Yellow Alert Announced By IMD

ರಾಜ್ಯದ ಅತೀ ಕನಿಷ್ಠ ಉಷ್ಣಾಂಶ ಬಾಗಲಕೋಟೆಯಲ್ಲಿ 10.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ನಗರ ವ್ಯಾಪ್ತಿಯಲ್ಲಿ ಗರಿಷ್ಠ 27.4 ಮತ್ತು ಕನಿಷ್ಠ 19.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಕೆಐಎಎಲ್​ನಲ್ಲಿ ಗರಿಷ್ಠ 28.7 ಮತ್ತು ಕನಿಷ್ಠ 19.0 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+