ಕರ್ನಾಟಕದ ಕರಾವಳಿಗೆ ಮತ್ತೆ ಮಳೆಯ ಆಘಾತ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು ಜುಲೈ 17: ಕರ್ನಾಟಕದ ಕರಾವಳಿ ಭಾಗದಲ್ಲಿ ಇಳಿಕೆಯಾಗುವ ಮನ್ಸೂಚನೆ ನೀಡಿದ್ದ ಮುಂಗಾರು ಮಳೆ ಮತ್ತೆ ಅಬ್ಬರಿಸುವ ಲಕ್ಷಣಗಳು ಘೋಚರಿಸುತ್ತಿವೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಭಾನುವಾರ ಕರಾವಳಿ ಭಾಗದಲ್ಲಿ ಅತಿ ಭಾರಿ ಮಳೆ ಆಗಿದೆ. ಸೋಮವಾರವು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ಅದೇ ರೀತಿ ಅತಿ ಭಾರಿ ಮಳೆ ಆಗುವ ಮನ್ಸೂಚನೆ ಇದೆ. ಹೀಗಾಗಿ ಅವುಗಳಿಗೆ 'ಆರೆಂಜ್ ಅಲರ್ಟ್' ನೀಡಲಾಗಿದೆ. ಉಳಿದಂತೆ ಜು.20ರವರೆಗೆ 'ಯೆಲ್ಲೋ ಅಲರ್ಟ್' ಕೊಡಲಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮುಂದಿನ ಎರಡು ದಿನ ಗುಡುಗು ಸಹಿತ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಈ ವೇಳೆ ಸಮುದ್ರ ತೀರದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 45-50ಕಿ.ಮೀ. ಮೀಟರ್ ಇರಲಿದ್ದು, ಕೆಲವೊಮ್ಮೆ ಅದು ಸುಮಾರು 60ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.

Heavy Rain Expected in Coastal Districts of Karnataka

ಕರಾವಳಿ ಜತೆಗೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಡಿಕೇರಿಗಳಲ್ಲಿ ಸಹ ಭಾರಿ ಮಳೆ ನಿರೀಕ್ಷೆ ಇರುವುದರಿಂದ ಜುಲೈ 19ರವರೆಗೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ. ಈ ಭಾಗದಲ್ಲಿ ಹೆಚ್ಚು ತಂಪು ವಾತಾವರಣ ನಿರ್ಮಾಣವಾಗಿದ್ದು, ಕೆಲವು ದಿನಗಳಿಂದ ಬಿಸಿಲಿನ ದರ್ಶನವೇ ಇಲ್ಲದಾಗಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಬೀದರ್ ನಲ್ಲಿ ಮಾತ್ರ ಕೆಲವು ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆ ಆಗಲಿದ್ದು, ಅಂದು ಅವರೆಡು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಕೊಡಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ ಬದ್ದಿದೆ

ರಾಜ್ಯದಲ್ಲಿ ಕಳೆದ ಎರಡು ಮೂರವಾರದಿಂದ ಹಿಡಿದಿದ್ದ ಮಳೆ ಕೊಂಚ ಕಡಿಮೆಯಾಗಿದೆ. ಹೀಗದ್ದರು ಕರಾವಳಿ ಭಾಗದಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24ಗಂಟೆಯಲ್ಲಿ ಉತ್ತರ ಕನ್ನಡದ ಗೇರಸೊಪ್ಪ ಅಧಿಕ ಮಳೆ ಅಂದರೆ 18ಸೆಂ.ಮೀ. ದಾಖಲಾಗಿದೆ. ಉಳಿದಂತೆ ಮೂಲ್ಕಿಯಲ್ಲಿ 16ಸೆಂ.ಮೀ, ಕೊಡಗಿನ ಭಾಗಮಂಡಲದಲ್ಲಿ 14ಸೆಂ.ಮೀ, ಕದ್ರಾ 13, ಕಾರವಾರ, ಅಂಕೋಲಾ, ಶಿವಮೊಗ್ಗದ ಲಿಂಗನಮಕ್ಕಿಯಲ್ಲಿ ತಲಾ 12ಸೆಂ.ಮೀ. ಮಳೆ ದಾಖಲಾಗಿದೆ. ಇದರಿಂದ ರಾಜ್ಯಗಳ ಜಲಾಶಯಗಳಲ್ಲಿ ನೀರಿನ ಮಟ್ಟ ಹಾಗೂ ಒಳಹರಿವಿನ ಮಟ್ಟವು ಅಧಿಕವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಇದೇ ವೇಳೆ ರಾಜ್ಯದಲ್ಲಿ ಗರಿಷ್ಠ ತಾಪಮಾನ ಬಳ್ಳಾರಿ ಮತ್ತು ರಾಯಚೂರಿನಲ್ಲಿ 33ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಕನಿಷ್ಠ ತಾಪಮಾನ ಮಡಿಕೇರಿಯಲ್ಲಿ 17.9ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Heavy Rain Expected in Coastal Districts of Karnataka

ಬೆಂಗಳೂರಿಗೆ ಏನಿದೆ ಮುನ್ಸೂಚನೆ?

ಬೆಂಗಳೂರಿನಲ್ಲಿ ಮುಂದಿನ 48 ಗಂಟೆಯಲ್ಲಿ ಮೋಡ ಕವಿದ ವಾತಾವರಣವೇ ಮುಂದುವರಿಯಲಿದ್ದು,ಕೆಲವೊಮ್ಮ ವಿವಿಧ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಳೆ ಸುರಿಯಬಹುದು. ಅಲ್ಲದೇ ಸಂಜೆ ವೇಳೆಗೆ ಮಳೆ ಸುರಿಸುವ ಮಾರುತಗಳು ಬೆಂಗಳೂರು ನಗರ ಭಾಗದಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ. ಈ ವೇಳೆ ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+