ಕನಕಪುರ, ಕೆಆರ್ ನಗರದಲ್ಲಿ ಧಾರಾಕಾರ ಮಳೆ
ಮಳೆಯ ನಡುವೆಯೂ ಕಲಬುರಗಿಯಲ್ಲಿ ಅತೀ ಹೆಚ್ಚಿನ 42.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದೇ ರೀತಿ ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿಯೂ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು, ಮೇ 17: ಸೋಮವಾರ ರಾಮನಗರದ ಕನಕಪುರದಲ್ಲಿ ಧಾರಕಾರ ಮಳೆಯಾಗಿದ್ದು 6 ಸೆಂಟಿ ಮೀಟರ್ ಮಳೆ ಸುರಿದಿದೆ. ಇನ್ನು ಮೈಸೂರಿನ ಕೆಆರ್ ನಗರದಲ್ಲಿಯೂ 4 ಸೆಂಟಿ ಮೀಟರ್ ಮಳೆಯಾಗಿದೆ.
ಕರ್ನಾಟಕದ ಒಳನಾಡಿನಲ್ಲಿ ಸೋಮವಾರವೂ ಮಳೆ ಮುಂದುವರಿದ್ದಿದ್ದು ಹಲವು ಭಾಗಗಳಲ್ಲಿ ಮಳೆಯಾದ ವರದಿಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಮಂಡ್ಯದ ಶ್ರೀರಂಗಪಟ್ಟಣ ಹಾಗೂ ಮಂಡ್ಯದಲ್ಲಿ 3 ಸೆಂಟಿ ಮೀಟರ್ ಮಳೆಯಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಆನೇಕಲ್, ರಾಮನಗರದ ಚನ್ನಪಟ್ಟಣದಲ್ಲಿ ತಲಾ ಎರಡು ಸೆಂಟಿ ಮೀಟರ್ ಮಳೆ ಸುರಿದಿದೆ. ಮಂಡ್ಯದ ಕೆಆರ್ ಸಾಗರ, ಮೈಸೂರಿನಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಆದರೆ ದಕ್ಷಿಣ ಒಳನಾಡಿನಲ್ಲಿ ಮಾತ್ರ ಒಣ ಹವೆ ಮುಂದುವರಿದಿದೆ. ಮಳೆಯ ನಡುವೆಯೂ ಕಲಬುರಗಿಯಲ್ಲಿ ಅತೀ ಹೆಚ್ಚಿನ 42.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದೇ ರೀತಿ ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿಯೂ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.












Click it and Unblock the Notifications